
ಕಲ್ಲಡ್ಕ ಫ್ಲೈಓವರ್ ಎರಡೂ ಕಡೆ ಸಂಚಾರಕ್ಕೆ ಅವಕಾಶ
ಬಂಟ್ವಾಳ: ಬಿ.ಸಿ.ರೋಡ್ ಅಡ್ಡಹೊಳೆ ಚತುಷ್ಪಥ ಹೆದ್ದಾರಿ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಕಲ್ಲಡ್ಕ ಫ್ಲೈಓವರ್ ನ ಒಂದು ಭಾಗ ಸಂಚಾರಕ್ಕೆಂದು ತೆರೆದುಕೊಂಡಿತ್ತು. ಇದೀಗ ಇನ್ನೊಂದು ಭಾಗದಲ್ಲೂ ಬುಧವಾರ ಸಂಜೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾದ ಹಿನ್ನಲೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಫ್ಲೈಓವರ್ ನಲ್ಲಿ ಸಂಚರಿಸಬಹುದಾಗಿದೆ.
ಜೂ. 2ರಂದು ಕಲ್ಲಡ್ಕ ಫ್ಲೈಓವರ್ ನ ಒಂದು ಭಾಗ ಸಂಚಾರಕ್ಕೆಂದು ತೆರೆದುಕೊಂಡಿತ್ತು.ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರ ನೇತೃತ್ವದಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಿ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಇನ್ನೊಂದು ಭಾಗದಲ್ಲೂ ಬುಧವಾರ ಸಂಜೆಯ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇದೀಗ ಪ್ಲೈಒವರ್ ನಲ್ಲಿ ಸರಾಗವಾಗಿ ಯಾವುದೇ ಅಡೆತಡೆ ಇಲ್ಲದೆ ವಾಹನ ಸಂಚರಿಸಬಹುದಾಗಿದೆ.
ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ 64 ಕಿ.ಮೂಈ. ಉದ್ದದ ಹೆದ್ದಾರಿ ಕಾಮಗಾರಿ 2017ರಲ್ಲಿ ಎಲ್. ಆಂಡ್ ಟಿ ಕಂಪನಿಗೆ 821 ಕೋಟಿ ರೂಗಳಿಗೆ ವಹಿಸಲಾಗಿತ್ತು. ಹಲವು ಕಾರಣಕ್ಕೆ ವಿಳಂಬವಾಗಿ ಬಳಿಕ ಅರ್ಧದಲ್ಲೇ ಸ್ಥಗಿತಗೊಂಡಿತು. 2021ರಲ್ಲಿ 64 ಕಿ.ಮೀ. ಉದ್ದದ ಹೆದ್ದಾರಿಯನ್ನು 49 ಕಿ.ಮೀ ಹಾಗೂ 15 ಕಿ.ಮೀ. ಎಂದು ವಿಭಾಗಿಸಿ ಕೆಎನ್ ಆರ್ ಕನ್ಸ್ ಸ್ಟ್ರಕ್ಷನ್ಸ್ ಹೈದರಾಬಾದ್ ಹಾಗು ಎಂ. ಔತಡೆ ಪ್ರೈ. ಲಿ. ಮಹಾರಾಷ್ಟ್ರ ಕಂಪನಿಗಳಿಗೆ ಗುತ್ತಿಗೆ ನೀಡಲಾಯಿತು. ಅಲ್ಲಿಂದ ಕಾಮಗಾರಿಗೆ ವೇಗ ದೊರಕಿತು. ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ನೆಕ್ಕಿಲಾಡಿ, ಉಪ್ಪಿನಂಗಡಿ ಜಂಕ್ಷನ್, ಉಪ್ಪಿನಂಗಡಿ ಸುಬ್ರಹ್ಮಣ್ಯ ಕ್ರಾಸ್, ನೆಲ್ಯಾಡಿ, ಪೆರಿಯಶಾಂತಿಗಳಲ್ಲಿ ಓವರ್ ಪಾಸ್ ಮೇಲ್ಸೇತುವೆ ಹಾಗೂ ಕಲ್ಲಡ್ಕದಲ್ಲಿ 2.1 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಕಾಮಗಾರಿ ಏಕಕಾಲದಲ್ಲಿ ಆರಂಭಗೊಂಡಿತು.ಕಲ್ಲಡ್ಕದ ಪೂರ್ಲಿಪ್ಪಾಡಿಯಿಂದ ಕೃಷಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದರ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ ಗಳ ಫ್ಲೈಓವರ್ ಇದಾಗಿದೆ.
ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ 64 ಕಿ.ಮಿ. ಉದ್ದದ ಹೆದ್ದಾರಿ ಕಾಮಗಾರಿ 2017ರಲ್ಲಿ ಎಲ್. ಆಂಡ್ ಟಿ ಕಂಪನಿಗೆ 821 ಕೋಟಿ ರೂಗಳಿಗೆ ವಹಿಸಲಾಗಿತ್ತು. ಹಲವು ಕಾರಣಗಳಿಂದಾಗಿ ವಿಳಂಬಗೊಂಡು ಬಳಿಕ ಅರ್ಧದಲ್ಲೇ ಸ್ಥಗಿತಗೊಂಡಿತು. 2021ರಲ್ಲಿ 64 ಕಿ.ಮೀ. ಉದ್ದದ ಹೆದ್ದಾರಿಯನ್ನು 49 ಕಿ.ಮೀ ಹಾಗೂ 15 ಕಿ.ಮೀ. ಎಂದು ವಿಭಾಗಿಸಿ ಕೆಎನ್ ಆರ್ ಕನ್ಸ್ ಸ್ಟ್ರಕ್ಷನ್ಸ್ ಹೈದರಾಬಾದ್ ಹಾಗೂ ಎಂ. ಔತಡೆ ಪ್ರೈ. ಲಿ. ಮಹಾರಾಷ್ಟ್ರ ಕಂಪನಿಗಳಿಗೆ ಗುತ್ತಿಗೆ ನೀಡಲಾಯಿತು. ಅಲ್ಲಿಂದ ಕಾಮಗಾರಿಗೆ ವೇಗ ದೊರಕಿತು. ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ನೆಕ್ಕಿಲಾಡಿ, ಉಪ್ಪಿನಂಗಡಿ ಜಂಕ್ಷನ್, ಉಪ್ಪಿನಂಗಡಿ ಸುಬ್ರಹ್ಮಣ್ಯ ಕ್ರಾಸ್, ನೆಲ್ಯಾಡಿ, ಪೆರಿಯಶಾಂತಿಗಳಲ್ಲಿ ಓವರ್ ಪಾಸ್ ಮೇಲ್ಸೇತುವೆ ಹಾಗೂ ಕಲ್ಲಡ್ಕದಲ್ಲಿ 2.1 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಕಾಮಗಾರಿ ಏಕಕಾಲದಲ್ಲಿ ಆರಂಭಗೊಂಡಿತು.
ಕಲ್ಲಡ್ಕದ ಪೂರ್ಲಿಪ್ಪಾಡಿಯಿಂದ ಕೃಷಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದರ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ ಗಳ ಫ್ಲೈಓವರ್ ಇದಾಗಿದೆ.
ಅದೇರೀತಿ ನರಹರಿ ಪರ್ವತದ ಮುಂಭಾಗ (ಬೋಳಂಗಡಿ ಚಡವು) ಪಕ್ಕದಲ್ಲೇ ನಿರ್ಮಿಸಿದ ಕಾಂಕ್ರೀಟ್ ರಸ್ತೆಯಲ್ಲಿಯು ಕ್ಯೂರಿಂಗ್ ಬಳಿಕ ಮಂಗಳವಾರದಿಂದ ಸಂಚಾರಕ್ಕೆ ಮುಕ್ತಗೊಂಡಿದೆ.
ಅಪಘಾತ ವಲಯವೆಂದೆ ಗುರುತಿಸಿದ್ದ ಬೋಳಂಗಡಿ ಚಡವು ಹೊಸ ಚತುಪ್ಪಥ ರಸ್ತೆ ನಿರ್ಮಾಣದಿಂದ ಇದೀಗ ಇತಿಹಾಸದ ಪುಟ ಸೇರಿದಂತಾಗಿದೆ.
ಕಳೆದ ಹಲವು ದಶಕಗಳಿಂದ ನರಹರಿ ಪರ್ವತ ಪರ್ವತದ ಮುಂಭಾಗ ಪದೇಪದೇ ವಾಹನ ಅಪಘಾತಗಳು ಸಂಭವಿಸಿ ಸಾವು-ನೋವುಗಳಾಗಿರುವುದಲ್ಲದೆ ಟ್ರಾಫಿಕ್ ಜಾಮ್ ಕೂಡ ಉಂಟಾಗುತಿತ್ತು.ಹೊಸವಿನ್ಯಾಸದ ರಸ್ತೆಯಿಂದಾಗಿ ಅದಕ್ಕೆಲ್ಲವು ಈಗ ಮುಕ್ತಿಸಿಕ್ಕಿದಂತಾಗಿದೆ.
ಇದೀಗ ತಗ್ಗು ಪ್ರದೇಶದಲ್ಲಿ ನಿರ್ಮಿಸಿದ ಒಂದು ಬದಿಯ ಕಾಂಕ್ರೀಟ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡಿದ್ದು ಮತ್ತೊಂದು ಬದಿಯಕಾಮಗಾರಿ ಇನ್ನಷ್ಟೆ ನಡೆಯಬೇಕಿದೆ. ಪ್ರಸ್ತುತ ಎರಡೂ ಬದಿಯ ವಾಹನಗಳು ಯಾವುದೇ ಅಡ್ಡಿಯಿಲ್ಲದೆ ಸರಾಗವಾಗಿ ಸಾಗಿ ಕಲ್ಲಡ್ಕ ಫೈ ಓವರ್ ಮೂಲಕ ಸಂಚರಿಸುತ್ತಿದೆ.