
ಕಂಬಕ್ಕೆ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ ಗೋರಕ್ಷಣೆ
Saturday, June 7, 2025
ಬಂಟ್ವಾಳ: ತಾಲೂಕಿನ ಸಜೀಪನಡು ಗ್ರಾಮದ ಬೈಲುಗುತ್ತು ಎಂಬಲ್ಲಿ ಕಳವುಗೈದು ತಂದು ಹಿಂಸಾತ್ಮಕವಾಗಿ ಕಟ್ಟಿಹಾಕಿರುವುದನ್ನು ದನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ರಕ್ಷಿಸಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯ ಉಪನಿರೀಕ್ಷಕರಾದ ಲೋಲಾಕ್ಷ ಮತ್ತವರ ಸಿಬ್ಬಂದಿಗಳು ದಾಳಿ ನಡೆಸಿ ಪರಿಶೀಲಿಸಿದಾಗ ಇಬ್ರಾಹಿಂ ಎಂಬಾತ ದನವೊಂದನ್ನು ಹಿಂಸತ್ಮಾಕವಾಗಿ ವಧೆ ಮಾಡುವ ಉದ್ದೇಶದಿಂದ ಎಲ್ಲಿಂದಲೋ ಕಳವು ಮಾಡಿಕೊಂಡು ಬಂದು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ್ದನೆನ್ನಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.