ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಿಗೆ ಪ್ರವಾಸಿಗರಿಗೆ ನಿಷೇದ

ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಿಗೆ ಪ್ರವಾಸಿಗರಿಗೆ ನಿಷೇದ

ಬೆಳ್ತಂಗಡಿ: ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗ ಆದೇಶ ಮಾಡಿದೆ.

ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು ಬಂಡೆಗಳಿದ್ದು, ಘಾಟಿ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದು, ಎಲ್ಲಾ ನದಿ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಒಳ ಹರಿವು ಜಾಸ್ತಿ ಇರುವುದರಿಂದ ಪ್ರವಾಸಿಗರ ಚಾರಣಕ್ಕೆ ಅನಾನುಕೂಲ ಪರಿಸ್ಥಿತಿ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿರುವ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ ಮತ್ತು ಬಂಡಾಜೆ ಜಲಪಾತಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ನಿಷೇಧಿಸುವುದು ಅವಶ್ಯವಾಗಿರುತ್ತದೆ. ಆದುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರ ಭದ್ರತಾ ಹಿತದೃಷ್ಟಿಯಿಂದ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೇ 31ರಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಆದೇಶ ಹೊರಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article