ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿ ಬಿದ್ದ ಬೊಲೆರೋ ವಾಹನ

ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿ ಬಿದ್ದ ಬೊಲೆರೋ ವಾಹನ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ 9:30 ಸುಮಾರಿಗೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿಗಳಾದ ಚೇತನ್ ಮತ್ತು ಸುರೇಶ್ ಇಬ್ಬರು ಉಡುಪಿ ಜಿಲ್ಲೆಯ ಕಾರ್ಕಳದ  ಸಂಬಂಧಿಕರ ಮನೆಗೆ ಹೋಗಿ ವಾಪಸ್ ಬರುವ ವೇಳೆ  ಚಾರ್ಮಾಡಿಯ ಬೀಟಿಗೆ ಹೆದ್ದಾರಿಯಲ್ಲಿ ನಾಯಿ ಅಡ್ಡ ಬಂದಿದ್ದು ಅದನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಆಗುತಿದ್ದ ಕಾಂಕ್ರಿಟ್ ಚರಂಡಿಗೆ ಬಿದಿದೆ . 

ಅದೃಷ್ಟವಶಾತ್ ವಾಹನದಲ್ಲಿದ್ದವರಿಗೆ ಯಾವುದೇ  ಹಾನಿಯಾಗಿಲ್ಲ. ಸ್ಥಳೀಯ ಯುವಕರ ತಂಡದ ಸಹಕಾರದಲ್ಲಿ ವಾಹನವನ್ನು ಹೊರತೆಗೆಯಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article