
ಉರುಳಿದ ಮರ: ಸಂಚಾರ ಸ್ಥಗಿತ
Monday, June 2, 2025
ಬೆಳ್ತಂಗಡಿ: ಭಾರೀ ಗಾಳಿ-ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿತ್ತು.
ಮಾಹಿತಿ ತಿಳಿದ ಸ್ಥಳೀಯರು ಅರಣ್ಯ ಇಲಾಖೆಯ ಸಹಕಾರದೊಂದಿಗೆ ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮರ ಬಿದ್ದಿದ್ದರಿಂದ ಸುಮಾರು
ಒಂದು ಗಂಟೆಗೂ ಹೆಚ್ಚು ಕಾಲ ನೂರಾರು ವಾಹನಗಳು ರಸ್ತೆಯ ಎರಡೂ ಬದಿಯಲ್ಲಿ ಕಾಯಬೇಕಾಗಿ ಬಂತು. ಇದೀಗ ರಸ್ತೆಗೆ ಬಿದ್ದ ಮರಗಳನ್ನು ತೆರವುಗೊಳಿಸಲಾಗಿದ್ದು, ವಾಹನ ಸಂಚಾರಕ್ಕೆ ಯಾವುದೇ ಅಡೆತಡಯಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.