ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸುತ್ತೇವೆ: ಸುರಕ್ಷಿತ ಸ್ಥಳಕ್ಕೆ ತೆರಳಲು ತಹಶಿಲ್ದಾರ್ ಪ್ರತಿಭಾ ಸಲಹೆ

ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸುತ್ತೇವೆ: ಸುರಕ್ಷಿತ ಸ್ಥಳಕ್ಕೆ ತೆರಳಲು ತಹಶಿಲ್ದಾರ್ ಪ್ರತಿಭಾ ಸಲಹೆ


ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿಯ ಮಾರುತಿ ರಸ್ತೆಯ ಬದಿಯಲ್ಲಿ ಕಡಲ್ಕೊರೆತ ಉಂಟಾಗಿದ್ದು, ನಿರ್ಮಿಸಿದ್ದ ತಡೆಗೋಡೆಯ ಕಲ್ಲುಗಳು ಸಾಗರದಲ್ಲಿ ಕೊಚ್ಚಿಕೊಂಡು ಹೋಗಿವೆ. ಸ್ಥಳಕ್ಕೆ ಭೇಟಿ ನೀಡಿದ ತಹಶಿಲ್ದಾರ್ ಪ್ರತಿಭಾ ಆರ್. ಸ್ಥಳೀಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದ್ದಾರೆ.

ಗ್ರಾಮಾಡಳಿತಾಧಿಕಾರಿಯವರಿಗೆ ಕೂಡಲೇ ಹತ್ತಿರದ ನಿವಾಸಿಗಳಾದ ಆನಂದ ಅವರ ಕುಟುಂಬವನ್ನು ಸ್ಥಳಾಂತರಿಸಲು ಸೂಚನೆ ನೀಡಿದ್ದಾರೆ.

ಮನೆ ಕೊಚ್ಚಿಕೊಂಡು ಹೋಗುವ ಅಪಾಯ ಕಡಲಿನಿಂದ 30 ಮೀಟರ್ ದೂರದಲ್ಲಿರುವ ಆನಂದ ಎಂಬುವರ ಮನೆ ಅಪಾಯದಲ್ಲಿದೆ. ಕೂಡಲೇ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ.

ಈ ಕಡಲ್ಕೊರೆತದಿಂದ ಆಸ್ತಿ ಪಾಸ್ತಿ ಹಾನಿ, ಜನಜೀವನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ. ಈ ಪ್ರದೇಶಕ್ಕೆ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲಿಸಿದರು.

ತಡೆಗೋಡೆ ನಿರ್ಮಿಸಲು ಮತ್ತು ಜಾರುತ್ತಿರುವ ಬ್ರೇಕ್ ವಾಟರ್ ಕಲ್ಲುಗಳನ್ನು ವ್ಯವಸ್ಥಿತಗೊಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಅವರಿಗೆ ಸೂಚನೆ ನೀಡಲಾಗಿದೆ. ಹಾಗೂ ಅಲ್ಲಿನ ನಿವಾಸಿಗಳಿಗೆ ಕಡಲ್ಕೊರೆತದ ಪರಿಸ್ಥಿತಿಯ ಕುರಿತು ತಿಳುವಳಿಕೆ ನೀಡಿದೆ.

ಸಸ್ಯವರ್ಗದ ಉಪಸ್ಥಿತಿಯು ಸಮುದ್ರದ ಸವೆತ, ಚಂಡಮಾರುತದಂಥ ಬಿರುಗಾಳಿಗಳಿಗೆ ನೈಸರ್ಗಿಕ ನಿರೋಧಕವಾಗಿದೆ ಎಂದು ಸಾಬೀತಾಗಿದೆ ಎಂಬುದನ್ನು ಗಮನಿಸಲಾಗಿದೆ. ಆದ್ದರಿಂದ ನಾವು ಕಡಲ್ಕೊರೆತ ಎದುರಿಸಲು ಸಮರ್ಥನೀಯ ಕ್ರಮವಾಗಿ ಜೈವಿಕ ತಡೆಗೋಡೆಯಾಗಿ ಜೈವಿಕ ರಕ್ಷಾಕವಚವನ್ನು ನಿರ್ಮಿಸಬಹುದಾಗಿದೆ.

ಈ ಕ್ರಮದ ಕುರಿತು ಶೀಘ್ರದಲ್ಲೇ ಬಂದರು ಮತ್ತು ಮೀನುಗಾರಿಕೆ ಇಲಾಖೆಯೊಂದಿಗೆ ಚರ್ಚಿಸಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ತಹಶಿಲ್ದಾರ್ ಪ್ರತಿಭಾ ಆರ್. ಪತ್ರಿಕೆಗೆ ತಿಳಿಸಿದ್ದಾರೆ.

ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್ ಹಾಗೂ ಗ್ರಾಮ ಆಡಳಿತಾಧಿಕಾರಿ ಶ್ರೀಕಾಂತ್ ಅವರು ಸ್ಥಳ ಪರಿಶೀಲನೆಗೆ ಸಾತ್ ನೀಡಿದರು. ಗ್ರಾಮ ಪಂಚಾಯತಿ ಸದಸ್ಯ ಪಾಂಡುರಂಗ ಕರ್ಕೇರಾ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article