
ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ
ಕಾಪು: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದಕ್ಷಿಣ, ಉತ್ತರ ಹಾಗೂ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಶನಿವಾರ ಕಾಪು ರಾಜೀವ ಭವನದಲ್ಲಿ ನೂತನ ಅಧ್ಯಕ್ಷರುಗಳಿಗೆ ಕಾಂಗ್ರೆಸ್ ಪಕ್ಷ ಧ್ವಜ ಹಸ್ತಾಂತರದ ಮಾಡುವ ಮೂಲಕ ಚಾಲನೆ ದೊರಕಿತು.
ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು.
ಅವರು ಈ ಸಂದರ್ಭ ಮಾತನಾಡಿ, ಆಡಳಿತಾರೂಢ ಮೋದಿ ಸರಕಾರದಿಂದ ಸಂವಿಧಾನಕ್ಕೆ ಧಕ್ಕೆ ತರುವಂತಾಗಿದೆ. ಜನಪರ ಆಶಯಕ್ಕೆ ಕಾಂಗ್ರೆಸ್‌ನಿಂದ ಸಂವಿಧಾನ ತಿದ್ದುಪಡಿ ಆಗಿದೆ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ, ಸಂವಿಧಾನ ನೀಡಿದ ಪಕ್ಷ. ಶೇ.40 ರಷ್ಟು ಯುವಕರ ಸೇರ್ಪಡೆಯಾದಾಗ ಮಾತ್ರ ಪಕ್ಷ ಬೆಳವಣಿಗೆ ಸಾಧ್ಯ. ದೇಶದ ಸಂವಿಧಾನ ನಮ್ಮ ಸಿದ್ಧಾಂತ. ಬಿಜೆಪಿಯಿಂದ ಸಂವಿಧಾನದ ಮೂಲ ಅಂಶ ಸಮಾಜವಾದಿ, ಜಾತ್ಯಾತೀತ ತೆಗೆದು ಹಾಕಲು ಚಿಂತನೆಯಾಗಿದೆ. ಸಂವಿಧಾನಕ್ಕೆ ಧಕ್ಕೆ ಬಂದರೆ ನಾವೆಲ್ಲರೂ ವಿರೋಧಿಸಲು ಅಣಿಯಾಗಬೇಕಿದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮಾತನಾಡಿ, ಯುವ ಕಾಂಗ್ರೆಸ್ ಕಾಂಗ್ರೆಸ್ ಪಕ್ಷದ ಬೆನ್ನೆಲುಬು. ಕಾಂಗ್ರೆಸ್ ಹಿರಿಯರ ಮಾರ್ಗದರ್ಶನದಲ್ಲಿ ಯುವಕರನ್ನು ಪಕ್ಷದೆಡೆ ಆಕರ್ಷಿಸುವ ಕಾರ್ಯ ಮಾಡಬೇಕಾಗಿದೆ ಎಂದು ಕಾಂಗ್ರೆಸ್ ತಂಡವನ್ನು ಅಭಿನಂದಿಸಿದರು.
ಮಹಮ್ಮದ್ ನಿಯಾಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ (ದಕ್ಷಿಣ) ಅಧ್ಯಕ್ಷರಾದ ವೈ.ಸುಕುಮಾರ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ (ಉತ್ತರ)ಅಧ್ಯಕ್ಷ ಸಂತೋಷ್ ಕುಲಾಲ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಉಡುಪಿ ಜಿಲ್ಲಾ ಯುವಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ದೀಪಕ್ ಕೋಟ್ಯಾನ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಅರ್ಜುನ್ ನಾಯರಿ, ಕಾಪು ಬ್ಲಾಕ್ ಯುವಕಾಂಗ್ರೆಸ್ ಸಮಿತಿ (ದಕ್ಷಿಣ) ಇದರ ಅಧ್ಯಕ್ಷ ಗೌರೀಶ್ ಕೋಟ್ಯಾನ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಅಧ್ಯಕ್ಷ ಶರತ್ ನಾಯ್ಕ್, ಕಾಪು ಬ್ಲಾಕ್ ಯುವಕಾಂಗ್ರೆಸ್ ಸಮಿತಿ (ದಕ್ಷಿಣ)ಯ ಮಾಜಿ ಅಧ್ಯಕ್ಷ ರಮೀಜ್ ಹುಸೇನ್, ಕಾಪು ಬ್ಲಾಕ್ ಯುವಕಾಂಗ್ರೆಸ್ ಸಮಿತಿ (ಉತ್ತರ)ಇದರ ಮಾಜಿ ಅಧ್ಯಕ್ಷ ರಾಕೇಶ್ ಶೆಟ್ಟಿ ಬೊಮ್ಮರಬೆಟ್ಟು, ಮುಖಂಡರು, ನಿಗಮ ಮಂಡಳಿಯ ಸದಸ್ಯರು, ಮುಂಚೂಣಿ ಘಟಕದ ವಿಭಾಗದ ಅಧ್ಯಕ್ಷರುಗಳು, ಕಾಪು ಬ್ಲಾಕ್ ಕಾಂಗ್ರೆಸ್‌ನ ಮುಖಂಡರುಗಳು, ಯುವಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.