ಕಾನೂನು ಬಾಹಿರ ಪ್ರತಿಭಟನೆ: ಪ್ರಕರಣ ದಾಖಲು

ಕಾನೂನು ಬಾಹಿರ ಪ್ರತಿಭಟನೆ: ಪ್ರಕರಣ ದಾಖಲು

ಕಡಬ: ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಹಿಂದುತ್ವ ಸಂಘಟನೆಗಳ ಮುಖಂಡರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆಯಂತೆ ಕಡಬ ಪೊಲೀಸರು ರಾತ್ರಿ ವೇಳೆ ಸಂಘಟನೆಯ ಪ್ರಮುಖರ ಮನೆಗಳಿಗೆ ತೆರಳಿ ಜಿಪಿಎಸ್ ಆಧಾರಿತ ಫೋಟೊ ತೆಗೆದುಕೊಂಡಿದ್ದರು. ಇದನ್ನು ವಿರೋಧಿಸಿ ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್ ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾಧಾಕೃಷ್ಣ, ಕೆ., ಜಯಂತ್ ಮತ್ತು ಇತರ ಮೂವರು ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ. ಅದರಂತೆ ಒಟ್ಟು ಹದಿನೈದು ಮಂದಿಯ ವಿರುದ್ದ ಕಡಬ ಪೊಲೀಸು ಠಾಣೆಯಲ್ಲಿ ಅ.ಕ್ರ: 39/2025 ಕಲಂ: 189(2),190 BNS-2023 ರಂತೆ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article