ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಸಭೆ

ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಸಭೆ


ಕಾರ್ಕಳ: ಕಾರ್ಕಳ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಸರ್ವ ಸದಸ್ಯರ ಸಭೆಯು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶುಭದರಾವ್ ಮಾತನಾಡಿ, ಕಾರ್ಕಳ ಸರ್ವಧರ್ಮೀಯರ ಪವಿತ್ರ ಧಾರ್ಮಿಕ ಕೇಂದ್ರಗಳನ್ನು ಒಳಗೊಂಡ ಪುಣ್ಯ ಕ್ಷೇತ್ರವಾಗಿದೆ, ಇಲ್ಲಿ ಎಲ್ಲಾ ಧರ್ಮೀಯರ ಪಾಲ್ಗೊಳ್ಳುವಿಕೆಯಿಂದ ಕಾಪಾಡಿಕೊಂಡು ಬಂದಿರುವ ಸಹೋದರತೆ ಮತ್ತು ಸೌಹಾರ್ದತೆ ಇಡೀ ದೇಶಕ್ಕೆ ಮಾದರಿಯಾಗಿದೆ ಅದನ್ನು ಬೆಳೆಸಿ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದು ಎಂದು ಹೇಳಿದರು.

ಕೆಲವರು ರಾಜಕೀಯ ಹಿತಾಸಕ್ತಿಗಾಗಿ ಅಲ್ಪಸಂಖ್ಯಾತರನ್ನು ದ್ವಿತೀಯ ದರ್ಜೆಯ ಪ್ರಜೆಗಳಾಗಿ ನೋಡುವ ಪ್ರಯತ್ನವನ್ನು ನಿರಂತರ ಮಾಡುತ್ತಾ ಅವರ ವಿರುದ್ಧ ದ್ವೇಷ ಅಪ ನಂಬಿಕೆಯನ್ನು ಬಿತ್ತುವ ಕಾರ್ಯವನ್ನು ಮಾಡುತ್ತಿದ್ದಾರೆ ಆದರೆ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಕೀಳಾಗಿಸುವ ಯಾವುದೇ ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ ಅಲ್ಪಸಂಖ್ಯಾತರ ರಕ್ಷಣೆ ಬಹುಸಂಖ್ಯಾತರಾದ ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಕೆ.ಪಿ.ಸಿ.ಸಿ. ಸದಸ್ಯ ನೀರೆ ಕೃಷ್ಣ ಶೆಟ್ಟಿ, ಬ್ಲಾಕ್ ಉಪಾದ್ಯಕ್ಷರಾದ ಅಶ್ಫಕ್ ಅಹ್ಮದ್, ಜಾರ್ಜ್ ಕ್ಯಾಸ್ಟಲೀನೊ ನಕ್ರೆ, ಮಾಜಿ ಜಿಲ್ಲಾದ್ಯಕ್ಷ ಮೊಹಿದ್ದೀನ್ ಸಂದರ್ಭೋಚಿತ ಮಾತುಗಳನ್ನಾಡಿ ಘಟಕದ ಸಂಘಟನೆಗೆ ಸಲಹೆ ನೀಡಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ, ಕಾನೂನು ಘಟಕದ ಅಧ್ಯಕ್ಷ ರೆಹಮ್ಮತ್ತುಲ್ಲಾ, ಸೇವಾದಳದ ಅದ್ಯಕ್ಷ ಅಬ್ದುಲಾ ಸಾಣೂರು, ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕ್ ಅತ್ತೂರು, ಅಂತೋಣಿ ಡಿ’ಸೋಜಾ ರಂಗನಪಲ್ಕೆ, ಗ್ರಾಮೀಣ ಅಧ್ಯಕ್ಷರಾದ, ಪ್ರಥ್ವಿರಾಜ್ ಜೈನ್, ರಾಜೇಶ್ ನೆಲ್ಸನ್, ವಿಲ್ಸನ್ ಲೋಬೋ, ರಮೇಶ್ ಶೆಟ್ಟಿ, ಉದಯ ಶೆಟ್ಟಿ ಕೌಡೂರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಯೋಜಕರಾದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶೇಖ್ ಶಬ್ಬಿರ್ ಪ್ರಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಪುರಸಭಾ ಸದಸ್ಯ ವಿನ್ನಿ ಬೋಲ್ಡ್ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article