
ಕೆರ್ವಾಶೆ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ನೋಟ್ ಪುಸ್ತಕ ವಿತರಣೆ
Monday, June 30, 2025
ಕಾರ್ಕಳ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೆರ್ವಾಶೆ ಇಲ್ಲಿ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ನೀಡಲ್ಪಟ್ಟ ಉಚಿತ ಸಮವಸ್ತ್ರ ವಿತರಣೆ ಹಾಗೂ ದಾನಿಗಳಿಂದ ಕೊಡಲ್ಪಟ್ಟ ನೋಟ್ ಪುಸ್ತಕ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಎಸ್‌ಡಿಎಮ್‌ಸಿ ಅಧ್ಯಕ್ಷ ನಾರಾಯಣ ಗುಡಿಗಾರ್ ಅವರ ಅಧ್ಯಕ್ಷತೆಯನ್ನು ನಡೆಯಿತು.
ಮುಖ್ಯ ಅತಿಥಿಗಳಾಗಿ ಕೆರ್ವಾಶೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸುನಿಲ್ ಶೆಟ್ಟಿ, ಧರ್ಮರಾಜ್ ಹೆಗ್ಡೆ ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಸೇರ್ವೆಗಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಉಮೇಶ್ ಕೆ.ಎಸ್., ಎಸ್‌ಡಿಎಂಸಿಯ ಉಪಾಧ್ಯಕ್ಷೆ ರೂಪ ಡಿ. ಶೆಟ್ಟಿ, ಎಸ್‌ಡಿಎಂಸಿಯ ಸದಸ್ಯರು, ಹಳೆ ವಿದ್ಯಾರ್ಥಿಗಳು, ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸಹಶಿಕ್ಷಕಿ ಸುನೀತಾ ನಾಯಕ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಪ್ರಮೀಳಾ ಪ್ರಸ್ತಾವನೆಗೈದರು, ಅಶ್ವಿನಿ ಹಾಗೂ ಸುಪ್ರೀತಾ ಕಾರ್ಯಕ್ರಮವನ್ನು ನಿರೂಪಿಸಿದರು. ಸೌಮ್ಯ ವಂದಿಸಿದರು.