
ಬ್ರಹ್ಮಾವರ-ಶಾಲಾ ಬಸ್ಸಿಗೆ ಲಾರಿ ಡಿಕ್ಕಿ: ವಿದ್ಯಾರ್ಥಿಗಳು ಪಾರು
Wednesday, June 18, 2025
ಕುಂದಾಪುರ: ಬ್ರಹ್ಮಾವರದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಬುಧವಾರ ಬೆಳಿಗ್ಗೆ ಶಾಲೆಗೆ ಕರೆದೊಯ್ಯುತ್ತಿದ್ದ ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದಿರುವುದರಿಂದ ಭಾರೀ ಅಪಾಯ ತಪ್ಪಿದೆ. ಕೆಲವು ಮಕ್ಕಳು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಬುಧವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಈ ಅಪಘಾತ ನಡೆದಿದೆ.
ಜಿ.ಎಮ್. ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವ ಸಂದರ್ಭ ಹಿಂದಿನಿಂದ ಬಂದ ಈಚರ್ ಲಾರಿಯೊಂದು ಡಿಕ್ಕಿ ಹೊಡೆದಿದೆ.
ಅಪಘಾತದಿಂದ ಹಲವು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡಲಾಗಿದೆ.
ಅಪಘಾತಕ್ಕೆ ಶಾಲಾ ಬಸ್ ಚಾಲಕನ ನಿರ್ಲಕ್ಷವೇ ಕಾರಣ ಎಂದು ತಿಳಿದುಬಂದಿದೆ.
ಬ್ರಹ್ಮಾವರ ಠಾಣಾ ಪೊಲೀಸ್ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.