ಆ.1-2: ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ

ಆ.1-2: ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ


ಮಂಗಳೂರು: ಮೂಡುಬಿದಿರೆಯ ಆಳ್ಚಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ’ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳದ 15ನೇ ಆವೃತ್ತಿ ಆಗಸ್ಟ್ 1 ಮತ್ತು 2ರಂದು ಆಳ್ವಾಸ್ ಕಾಲೇಜಿನ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಮೇಳದಲ್ಲಿ ಪಾಲ್ಗೊಳ್ಳುವ ಕಂಪನಿಗಳ ವಿವರವನ್ನು www.alvaspragati.comನಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಕಡ್ಡಾಯವಾಗಿ ನೋಂದಣಿ ಮಾಡಬೇಕು. ಈ ಬಾರಿ 300ರಷ್ಟು ಕಂಪನಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹೊರ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ಜುಲೈ 31ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಐಟಿಐ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವನ್ನೂ ಕಲ್ಪಿಸಲಾಗುವುದು. ಮಾಹಿತಿಗಾಗಿ ಅಭ್ಯರ್ಥಿಗಳು 9741440490, 9611750531, 7975223865 ಸಂಪರ್ಕಿಸಬಹುದು. ನೋಂದಣಿ ಮತ್ತು ಮಾಹಿತಿಗೆ ಕಂಪನಿಗಳು 9731953123ಕ್ಕೆ ಕರೆ ಮಾಡಬಹುದು.

ಅಭ್ಯರ್ಥಿಗಳು ಪಾಸ್‌ಪೋರ್ಟ್ ಅಳತೆಯ 5ರಿಂದ 10 ಭಾವಚಿತ್ರ, ಸಂಪೂರ್ಣ ಶೈಕ್ಷಣಿಕ ಮಾಹಿತಿ ಒಳಗೊಂಡ ರೆಸ್ಯೂಮ್‌ನ 8ರಿಂದ 10 ಪ್ರತಿಗಳು, ಅಂಕಪಟ್ಟಿಯ ಜೆರಾಕ್ಸ್ ಪ್ರತಿಗಳು, ಆನ್‌ಲೈನ್ ಮೂಲಕ ನೋಂದಣಿ ಮಾಡಿದ್ದರ ಸಂಖ್ಯೆ ಹೊಂದಿರಬೇಕು. ಉದ್ಯೋಗ ಮೇಳದಂದು ಬೆಳಗ್ಗೆ 8 ಗಂಟೆಗೆ ಮೂಡುಬಿದಿರೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಹಾಜರಿರಬೇಕು ಎಂದು ಮೋಹನ ಆಳ್ವ ತಿಳಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ತರಬೇತಿ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥೆ ರಂಜಿತಾ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article