ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಜೂ.10 ರಿಂದ ಸಂಜೆ 5 ಗಂಟೆಯಿಂದ 6.30ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ.
ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡಲಿದ್ದಾರೆ.
ಅಂತರಾಷ್ಟ್ರಿಯ ಯೋಗದಿನಾಚರಣೆಯ ಪೂರ್ವಭಾವಿ ತಯಾರಿಯ ಯೋಗಾಭ್ಯಾಸ. ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ 0824-2414412 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.