
ಜೂ.13 ರಂದು ಸ್ಪೆಷಲ್ ಆಕ್ಷನ್ ಪೋರ್ಸ್‌ಗೆ ಚಾಲನೆ
Tuesday, June 10, 2025
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಹಿತಕರ ಘಟನೆಗಳ ನಿಯಂತ್ರಣಕ್ಕೆ ಸರಕಾರ ರಚಿಸಲು ಉದ್ದೇಶಿಸಿರುವ ಸ್ಪೆಷಲ್ ಆಕ್ಷನ್ ಪೋರ್ಸ್‌ಗೆ ಜೂ. 13ರಂದು ಚಾಲನೆ ದೊರೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯೂ ಆಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಂದು ಬೆಳಿಗ್ಗೆ 9ಕ್ಕೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಸ್ಪೆಷಲ್ ಆಕ್ಷನ್ ಪೋರ್ಸ್ ಉದ್ಘಾಟಿಸುವರು.