ಜೂ.18 ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ

ಜೂ.18 ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಜೂ.18 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 11.15- ಮಂಗಳೂರು ವಿಮಾನ ನಿಲ್ದಾಣ ಆಗಮನ, 12.30- ಪುತ್ತೂರಿನಲ್ಲಿ ಸರಕು ಮತ್ತು ಸೇವಾ ತೆರಿಗೆಯ ಲೆಕ್ಕಪರಿಶೋಧನಾ ಕಚೇರಿ ಮತ್ತು ಜಾರಿ ವಿಭಾಗದ ಹೊಸ ಕಟ್ಟಡ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 2.30 - ಸುಳ್ಯ ತಾಲೂಕು ಪಂಚಾಯತ್ ರಾಜ್ಯ ಇಂಜಿನಿಯರಿಂಗ್ ಉಪ ವಿಭಾಗದ ನೂತನ ಕಚೇರಿ ಕಟ್ಟಡ ಉದ್ಘಾಟನೆ, 3 - ಸುಳ್ಯ ತಾಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ ಉದ್ಘಾಟನೆ, 3.30 - ಅರಂಬೂರು ಆಲೆಟ್ಟಿ ಗ್ರಾಮದ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ ಉದ್ಘಾಟನೆ ನಂತರ ಸಂಜೆ 4 - ಸುಳ್ಯದಿಂದ ಮಂಗಳೂರಿಗೆ ನಿರ್ಗಮನ. ಸಂಜೆ 5.30- ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಂಗಾರು ಮಳೆಯ ಹಾನಿ ಮತ್ತು ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. 10.45 - ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article