ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ

ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ


ಮಂಗಳೂರು: ರಾಜ್ಯ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೆ.ಎಸ್.ಆರ್.ಟಿ.ಸಿ. ಮಂಗಳೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರು ಗುರುವಾರ ಚಾಲನೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ ಮನೆಯ ಬಾಗಿಲಿಗೆ ತಲುಪಿಸುವುದರ ಜೊತೆಗೆ ಸರ್ಕಾರದಿಂದ ಜಾರಿ ಮಾಡುವಂತಹ ಯೋಜನೆಗಳ ಸೌಲಭ್ಯಗಳನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ ಅವರು, ಸರಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗೀಯ ಲೆಕ್ಕಾಧಿಕಾರಿ ಹರೀಶ್  ಕೊಟ್ಟಾರಿ, ಮಂಗಳೂರು ಡಿಪೋ ವ್ಯವಸ್ಥಾಪಕ ಶಿವರಾಂ ನಾeಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

18 ರವರೆಗೆ ಪ್ರದರ್ಶನ..

ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳ ಅನುಷ್ಠಾನದ ಕುರಿತ ಅಂಕಿ-ಅಂಶಗಳು, ಯೋಜನೆಯ ಮಾಹಿತಿ, ಫಲಾನುಭವಿಗಳ ಛಾಯಾಚಿತ್ರ/ಅನಿಸಿಕೆಗಳನ್ನು ಪ್ರದರ್ಶಿಸಲಾಗುತ್ತಿದೆ.      

ಇದಲ್ಲದೇ ಮುಖ್ಯಮಂತ್ರಿಗಳ ಜತೆ ಸೆಲ್ಫಿ ತೆಗೆದುಕೊಳ್ಳಲು ಅನುಕೂಲವಾಗುವಂತೆ ಸಾರ್ವಜನಿಕರಿಗಾಗಿ ನಾಲ್ಕು ಸೆಲ್ಫಿ ಪಾಯಿಂಟ್ ಕೂಡ ಸ್ಥಾಪಿಸಲಾಗಿದೆ. ಜೂನ್ 18 ರವರೆಗೆ ಮಾಹಿತಿ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಾಹಿತಿ ಪ್ರದರ್ಶನವನ್ನು ವೀಕ್ಷಿಸಬೇಕು ಎಂದು ಜಿಲ್ಲಾ ವಾರ್ತಾಧಿಕಾರಿಗಳು ಕೋರಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article