
ನೀಟ್-2025 ಪರೀಕ್ಷೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ವೈದ್ಯಕೀಯ ವಿಭಾಗದಲ್ಲಿ ಸಾಧನೆ
Saturday, June 14, 2025
ಮಂಗಳೂರು: ನೀಟ್ 2025 ನಡೆಸಿರುವ ವೈದ್ಯಕೀಯ ಪದವಿ ಪರೀಕ್ಷೆಗಳಿಗೆ ನಡೆಸಿರುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಕ್ತಿ ಪ.ಪೂ. ಕಾಲೇಜಿನ 7 ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಶಕ್ತಿ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅನುರಾಗ್ ಆರ್. ನಾಕ್-550 ಅಂಕ (99.4359343 ಪರ್ಸೆಂಟೈಲ್)ನೊಂದಿಗೆ ರಾಷ್ಟ್ರಮಟ್ಟದಲ್ಲಿ 12265 ರ‍್ಯಾಂಕ್ ಪಡೆದಿರುತ್ತಾರೆ. ಸ್ವಪ್ನ-525, ಅಶ್ವತ್ ಅಜಿತ್ ಪೈ-510, ಮೌನ ಜಿ.-510, ಅಭಿಜ್ಞ-504, ವೃಷ್ಟಿ ಶೆಟ್ಟಿ-479 ಹಾಗೂ ಸಂಜನ ರಾವ್-477 ಅಂಕಗಳನ್ನು ಗಳಿಸಿ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ನಮ್ಮ ಸಂಸ್ಥೆಯ ಒಟ್ಟು 49 ವಿದ್ಯಾರ್ಥಿಗಳು ನೀಟ್ 2025 ಪರೀಕ್ಷೆಯನ್ನು ಬರೆದ್ದಿದ್ದು ಇದರಲ್ಲಿ 7 ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುತ್ತಾರೆ. ಪ್ರತಿ 7 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ವೈದ್ಯಕೀಯ ವಿಭಾಗಕ್ಕೆ ಆಯ್ಕೆಯಾಗುತ್ತಿರುವುದಕ್ಕೆ ಸಂಸ್ಥೆಯ ಸಂಸ್ಥಾಪಕರು ಮತ್ತು ಆಡಳಿತಾಧಿಕಾರಿ ಡಾ. ಕೆ.ಸಿ. ನಾಕ್ ಅವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು. ಈ ಸಾಧನೆ ಮಾಡಲು ಶ್ರಮಿಸಿದ ಸಂಸ್ಥೆಯ ಉಪನ್ಯಾಸಕ ಮತ್ತು ಇತರ ಸಿಬ್ಬಂದಿ ವರ್ಗಕ್ಕೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಮೂರ್ತಿ ಹೆಚ್., ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್, ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.