ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು: ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಹಾಗೂ ಯೋಗ ಸಂಘಟನೆಗಳ ಸಹಯೋಗದೊಂದಿಗೆ ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯ ವಿವಿಧೆಡೆಗಳಲ್ಲಿ ಯೋಗ ಸಂಘಟನೆಗಳು/ ಆಯುಷ್ ಕಾಲೇಜುಗಳು, ಆಯುಷ್ಮಾನ್ ಆರೋಗ್ಯ ಮಂದಿರಗಳು ಸೇರಿ ಸಾರ್ವಜನಿಕರಿಗೆ ಯೋಗ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಯೋಗ ಹರಿತ್..

ಯೋಗಾಭ್ಯಾಸದೊಂದಿಗೆ ಪರಿಸರ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವಂತಹ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಯೋಗ ಪಾರ್ಕ್..

ಆಯುಷ್ಮಾನ್ ಆರೋಗ್ಯ ಮಂದಿರ ಬಳ್ಕುಂಜೆ ಇಲ್ಲಿ ಔಷಧೀಯ ಸಸ್ಯಗಳ ಉದ್ಯಾನವನ ನಿರ್ಮಿಸಲಾಗಿದ್ದು, ಇಲ್ಲಿ ಪ್ರತೀ ದಿನ ಸಾರ್ವಜನಿಕರಿಗೆ ಯೋಗತರಬೇತಿಯನ್ನು ನೀಡಲಾಗುತ್ತಿದೆ.

ಉದ್ಯೋಗಿಗಳಿಗೆ/ಸಾರ್ವಜನಿಕರಿಗೆ ಕೆಲಸದ ಸ್ಥಳದಲ್ಲಿಯೇ ಕುಳಿತುಕೊಂಡು ಮಾಡಬಹುದಾದಂತಹ ಯೋಗಾಸನ ಹಾಗೂ ಪ್ರಾಣಾಯಾಮದ ತರಬೇತಿಗಳನ್ನು ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಕಾಲೇಜುಗಳಿಂದ ಆಯೋಜಿಸಲಾಗುತ್ತಿದೆ. ಇದರಿಂದಾಗಿ ತುಂಬಾ ಹೊತ್ತು ಕುಳಿತು ಕೆಲಸ ಮಾಡುವಂತಹ ಉದ್ಯೋಗಿಗಳಿಗೆ ಒತ್ತಡ ನಿರ್ವಹಣೆ ಹಾಗೂ ಕೆಲಸದಲ್ಲಿ ಉತ್ಸಾಹ ಹೆಚ್ಚಿಸುವ ಪುಶ್ಚೇತನವನ್ನು ತುಂಬಲು ಸಹಕಾರಿಯಾಗುತ್ತಿದೆ. ಕೆಲಸದ ವೇಳೆಯಲ್ಲಿ 05 ನಿಮಿಷದ ಯೋಗ ವಿರಾಮವನ್ನು ಆಯುಷ್ ಇಲಾಖೆ ಪರಿಚಯಿಸುತ್ತಿದೆ.

Yoga Unplugged: ವಿದ್ಯಾರ್ಥಿಗಳಲ್ಲಿ ಹಾಗೂ ಯುವ ಜನತೆಯಲ್ಲಿ ಯೋಗ ಮಹತ್ವವನ್ನು ತಿಳಿಸಲು ಹಾಗೂ ಯೋಗದ ಸದುಪಯೋಗವನ್ನು ತಲುಪಿಸಲು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಸುಮಾರು 60,000 ಸಾರ್ವಜನಿಕರಿಗೆ ವಿವಿಧ ಕಡೆಗಳಲ್ಲಿ ಯೋಗ ತರಬೇತಿಯನ್ನು ನೀಡಲಾಗುತ್ತಿದೆ. ಯೋಗದ ಬಗ್ಗೆ ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article