
ಜೂ.4 ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್ 4 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 12.35 - ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 2- ಚೇಳ್ಯಾರು ಕಂಡೇವು ಅರಸೇ ಉಳ್ಳಾಯೇ ನದಿತಟ ಕಲುಷಿತ ನೀರು ನಂದಿನಿ ನದಿ ಸೇರುವ ಸಮಸ್ಯೆಯ ಕುರಿತು ಸ್ಥಳ ಪರಿಶೀಲನೆ, 2.45- ಮುಲ್ಕಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 2.30- ಮುಲ್ಕಿ ತಾಲೂಕು ಪ್ರಜಾಸೌಧ ಕಟ್ಟಡ ಕಾಮಗಾರಿ ವೀಕ್ಷಣೆ, 3- ಕಿನ್ನಿಗೋಳಿ ರಾಜಾಂಗಣದಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ, ಸಂಜೆ ೪- ಕಿನ್ನಿಗೋಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 4.45- ಬಜಪೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 5.30 ದೇರಳಕಟ್ಟೆ ಯೆನೆಪೊಯ ವಿಶ್ವವಿದ್ಯಾಲಯದಲ್ಲಿ ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನೆಪೊಯ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನೆಪೊಯ ವಿಶ್ವವಿದ್ಯಾಲಯ ಮಂಗಳೂರು ಇವರ ಸಹಯೋಗದಲ್ಲಿ ನಡೆಯುವ ಅಂತರಾಷ್ಟ್ರೀಯ ಯುವಶೃಂಗಸಭೆ 2025 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 7.25 ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.