
ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ: 56 ಮಂದಿ ಪೊಲೀಸ್ ಸಿಬ್ಬಂದಿ ವರ್ಗಾವಣೆ
Thursday, June 19, 2025
ಮಂಗಳೂರು: ಕೆಲ ದಿನಗಳ ಹಿಂದೆ ಕರಾವಳಿಯ ಐಪಿಎಸ್-ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಬಲಪಡಿಸುವ ಯತ್ನವನ್ನು ರಾಜ್ಯ ಸರ್ಕಾರ ಮಾಡಿತ್ತು. ಇದೀಗ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ಮಾಡಲಾಗಿದ್ದು, 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಹಲವು ವರ್ಷಗಳಿಂದ ಒಂದೇ ಕಡೆ ತಳ ಊರಿದ್ದ ಸಿಬ್ಬಂದಿಗಳ ಸ್ಥಳಾಂತರ ಮಾಡಲಾಗಿದೆ. ಸಿ.ಸಿ.ಬಿ, ಸೆನ್ ಸೇರಿದಂತೆ ಕಮಿಷನರೇಟ್ ಪ್ರದೇಶಕ್ಕೆ ಒಳಪಡುವ ಠಾಣೆಗಳ ಹಲವು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.
ಇಲ್ಲಿದೆ ವರ್ಗಾವಣೆಯಾದ ಪೊಲೀಸ್ ಸಿಬ್ಬಂದಿಗಳ ವಿವರ: