
ಜೂ.5ರಂದು ಗಿಡ ನೆಡುವ ಸ್ಪರ್ಧೆಗೆ ಚಾಲನೆ
Tuesday, June 3, 2025
ಮಂಗಳೂರು: ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಮಂಗಳೂರು ವಿಭಾಗ ಮಟ್ಟದ ಗಿಡ ನೆಡುವ ಸ್ಪರ್ಧೆಯನ್ನು ಜೂ.5 ರಂದು ಬೆಳಗ್ಗೆ 9.30ಕ್ಕೆ ಕನ್ಯಾನದ ಒಡಿಯೂರು ಶ್ರೀ ಗುರುದೇವ ಐಟಿಐ ಸಭಾಂಗಣದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೊ. ಕೆ.ಆರ್. ಕವಿತಾ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಕ ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಆಶಯ ಭಾಷಣ ಮಾಡಲಿದ್ದಾರೆ.
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಮಂಗಳೂರು ವಿ.ವಿ. ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶೇಷಪ್ಪ ಅಮೀನ್, ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ, ಪರಿಸರ ಪ್ರೇಮಿ ಮಾಧವ ಉಳ್ಳಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.