ನಾಟಾ ಫಲಿತಾಂಶದಲ್ಲಿ ಎಕ್ಸ್‌ಪರ್ಟ್ ವಿದ್ಯಾರ್ಥಿಗಳ ಮೇಲುಗೈ

ನಾಟಾ ಫಲಿತಾಂಶದಲ್ಲಿ ಎಕ್ಸ್‌ಪರ್ಟ್ ವಿದ್ಯಾರ್ಥಿಗಳ ಮೇಲುಗೈ


ಮಂಗಳೂರು: ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ಎನ್‌ಎಟಿಎ-ನಾಟಾ) ಪರೀಕ್ಷೆಯಲ್ಲಿ ರಾಜ್ಯಮಟ್ಟದ ಮೊದಲ 10 ರ‍್ಯಾಂಕ್‌ಗಳಲ್ಲಿ ಮೂರು ರ‍್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ.

ಪ್ರಿಯಾಂಕಾ ಯಲಮೇಲಿ 6ನೇ ರ‍್ಯಾಂಕ್, ಶೈವಿ ಕೆ.ಎಚ್. 7ನೇ ರ‍್ಯಾಂಕ್, ಹಾಗೂ ನಮ್ರತಾ ಜಿ. 10ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಬಾಕಿ ಉಳಿದಂತೆ ಅಬ್ದುಲ್ ಖಾದರ್ ಮಸೂರ್ ಮೊಮಿನ್ 52ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಆರ್ಕಿಟೆಕ್ಚರ್ ವಿಭಾಗವು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಒದಗಲಿರುವ ಹಿನ್ನೆಲೆಯಲ್ಲಿ ಈ ಕೋರ್ಸ್‌ಗೆ ಪ್ರಾಮುಖ್ಯತೆ ಬಂದಿದೆ. ಈ ಕೋರ್ಸ್‌ನ ಪ್ರವೇಶಕ್ಕೆ ನಾಟಾ ಪರೀಕ್ಷೆಯ ಫಲಿತಾಂಶವೇ ಮಾನದಂಡವಾಗಿದೆ. ಹೀಗಾಗಿ ಈ ನಾಟಾ ಪ್ರವೇಶ ಪರೀಕ್ಷೆಯ ತಯಾರಿಕೆ ಕೋಚಿಂಗ್ ಪ್ರಾಮುಖ್ಯತೆ ಪಡೆದುಕೊಂಡಿದೆ. ಪ್ರತಿ ವರ್ಷ ನಾಟಾ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುತ್ತಿರುವ ಎಕ್ಸ್‌ಪರ್ಟ್‌ನ ವಿದ್ಯಾರ್ಥಿಗಳು ಈ ಭಾರಿಯೂ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ನಾಟಾ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article