
ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕ್ಯೂಟ್
Tuesday, June 3, 2025
ಮಂಗಳೂರು: ಬ್ಯಾಂಕ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಂಪ್ಯೂಟರ್ ಸಹಿತ ವಿವಿಧ ಉಪಕರಣಗಳಿಗೆ ಹಾನಿಯಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ರಥಬೀದಿಯಲ್ಲಿರುವ ಬ್ಯಾಂಕ್ ಶಾಖೆಯೊಂದರ ಮೊದಲ ಮಹಡಿಯಲ್ಲಿರುವ ಹೆಲ್ಪ್ ಡೆಸ್ಕ್ ವಿಭಾಗದ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು ಕೂಡಲೇ ಬ್ಯಾಂಕ್ ಸಿಬ್ಬಂದಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ, ವಿಚಾರ ತಿಳಿದು ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಸಿಬಂದಿ ಬಂದು ಪರಿಶೀಲನೆ ನಡೆಸಿದ ವೇಳೆ ಎಸಿ ಕೊಠಡಿಯಾಗಿರುವ ಕಾರಣ ಹೊಗೆ ಹೊರ ಹೋಗಲು ವ್ಯವಸ್ಥೆ ಇಲ್ಲದೆ ಬ್ಯಾಂಕ್ ಕೊಠಡಿಯೊಳಗೆ ದಟ್ಟ ಹೊಗೆ ಶೇಖರಣೆಯಾಗಿತ್ತು ಇದಾದ ಬಳಿಕ ಅಗ್ನಿ ಶಾಮಕ ಸಿಬ್ಬಂದಿ ಫ್ಯಾನ್ ಬಳಸಿ ಹೊಗೆ ಹೊರ ಹೋಗಲು ವ್ಯವಸ್ಥೆ ಮಾಡಿಕೊಟ್ಟು ಹೊಗೆ ಹತೋಟಿಗೆ ತಂದಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬ್ಯಾಂಕ್‌ನಲ್ಲಿದ್ದ ಕಂಪ್ಯೂಟರ್ ಸಹಿತ ವಿವಿಧ ಉಪಕರಣಗಳಿಗೆ ಹಾನಿಯಾಗಿದೆ.