ಕರಾವಳಿಯಲ್ಲಿ ಸರ್ಕಾರಕ್ಕೂ ಜಿಹಾದಿಗಳಿಗೂ, ಹಿಂದೂಗಳೇ ಟಾರ್ಗೆಟ್: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಕರಾವಳಿಯಲ್ಲಿ ಸರ್ಕಾರಕ್ಕೂ ಜಿಹಾದಿಗಳಿಗೂ, ಹಿಂದೂಗಳೇ ಟಾರ್ಗೆಟ್: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ


ಮಂಗಳೂರು: ವೋಟ್ ಬ್ಯಾಂಕ್ ರಾಜಕಾರಣದ ನೀಚ ಮಟ್ಟಕ್ಕೆ ಇಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ಪ್ರಮುಖರನ್ನು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವ ಮೂಲಕ ಕರಾವಳಿ ಪ್ರದೇಶದ ಸಾಮಾಜಿಕ ಸ್ವಾಸ್ಥ್ಯವನ್ನು ಇನ್ನಷ್ಟು ಹಾಳು ಮಾಡಲು ಹೊರಟಿರುವುದಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್.ಎಸ್.ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ರವರ ಮೇಲೆ ಪ್ರಕರಣ ದಾಖಲಿಸಿರುವುದು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ನೊಟೀಸ್ ನೀಡಿರುವುದು, ರಾತ್ರೋರಾತ್ರಿ ಸಂಘಟನೆಗಳ ಕಾರ್ಯಕರ್ತರ ಮನೆಗೆ ಪೊಲೀಸರನ್ನು ನುಗ್ಗಿಸುತ್ತಿರುವುದು, 15 ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಿರುವುದು ಸೇರಿದಂತೆ ಜಿಲ್ಲೆಯಲ್ಲಿ ಹಿಂದೂಗಳ ಪಾಲಿಗೆ ಭಯಭೀತ ವಾತಾವರಣ ಸೃಷ್ಟಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುತ್ತಿರುವ ಕಾಂಗ್ರೆಸ್ ಸರ್ಕಾರ, ಹಿಂದೂಗಳ ವಿರುದ್ಧ ದಾಳಿ ಮಾಡುವ, ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವ ಎಷ್ಟು ಮತಾಂಧ ಜಿಹಾದಿಗಳನ್ನು ಬಂಧಿಸಿದೆ ಎಂಬುದನ್ನು ಮೊದಲು ಬಹಿರಂಗಪಡಿಸಲಿ. ಅದು ಬಿಟ್ಟು ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ಎಂಬಂತೆ ತಾಲಿಬಾನ್ ಮಾದರಿ ಆಡಳಿತ ನೀಡುವುದು ಬೇಡ ಎಂದು ಎಚ್ಚರಿಸಿದರು.

ಸರ್ಕಾರವು ಇಂತಹ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿ ಸ್ಥಾಪಿಸಬೇಕು ವಿನಃ, ಕೇವಲ ಒಂದು ಸಮುದಾಯದ ಪರವಾಗಿ ನಡೆದುಕೊಳ್ಳುವುದಲ್ಲ. ಪೊಲೀಸರ ಈ ಕ್ರಮ ಜಿಲ್ಲೆಯಲ್ಲಿ ಶಾಂತಿ ಮೂಡಿಸುವ ಬದಲು ಇನ್ನಷ್ಟು ಪ್ರಕ್ಷುಬ್ಧತೆ ಸೃಷ್ಟಿಸುವ ಸಾಧ್ಯತೆಯಿದ್ದು, ಜನರ ತಾಳ್ಮೆಯ ಕಟ್ಟೆಯೊಡೆದರೆ ಮುಂದಾಗುವ ಎಲ್ಲಾ ಅನಾಹುತಗಳಿಗೆ ಪೊಲೀಸ್ ಇಲಾಖೆ ಹಾಗೂ ಸರ್ಕಾರವೇ ಹೊಣೆಯಾಗಬೇಕಾದೀತು. ಹಾಗಾಗಿ ಕೂಡಲೇ ಇಂತಹ ಹಿಂದೂ ವಿರೋಧಿ ನೀತಿಯನ್ನು ಕೈ ಬಿಡುವಂತೆ ಶಾಸಕರು ಪ್ರಕಟಣೆಯಲ್ಲಿ ಆಗ್ರಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article