
ಪ್ರಚೋದನಕಾರಿ ಭಾಷಣ: ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಭಟ್ ವಿರುದ್ಧ ಪ್ರಕರಣ
Monday, June 2, 2025
ಮಂಗಳೂರು: ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ ಎಂದು ಆರೋಪಿ ಆರ್.ಎಸ್.ಎಸ್. ನಾಯಕ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್‌ನಲ್ಲಿ ಮೇ 12ರಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ಥ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಜೂ.2ರಂದು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಂಡನೆ..:
ಕಲ್ಲಡ್ಕ ವಿರುದ್ಧ ಪ್ರಕರಣ ದಾಖಲಾಗಿರುವುದನ್ನು ಹಿಂದೂ ಸಂಘಟನೆಗಳು, ದ.ಕ. ಜಿಲ್ಲಾ ಬಿಜೆಪಿ, ಬಿಜೆಪಿ ಶಾಸಕರು ತೀವ್ರವಾಗಿ ಖಂಡಿಸಿ ಜೇನು ಗೂಡಿಗೆ ಕಲ್ಲು ಹೊಡೆದರೆ ಏನಾಗುತ್ತದೆ ಎಂಬುದು ತಿಳಿದಿರಲಿ ಎಂದು ಸರಕಾರವನ್ನು ಎಚ್ಚರಿಸಿದ್ದಾರೆ.