
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವಿಶ್ವ ಪರಿಸರ ದಿನಾಚರಣೆ
Friday, June 6, 2025
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತಾನೆಯ ಬಿ.ಅರ್. ಹರ್ನೆ ಆಯುರ್ವೇದ ಮೆಡಿಕಲ್ ಕಾಲೇಜಿನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಪ್ರಶಾಂತ್ ಪೈ ಪಶ್ಚಿಮ ಘಟ್ಟಗಳ ಸಸ್ಯ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ಲಾಸ್ಟಿಕ್ ಮಾಲಿನ್ಯದಿಂದ ವನ್ಯ ಪ್ರಾಣಿಗಳಿಗೆ ಹೇಗೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ತಿಳಿಸಿಕೊಟ್ಟರು.
ಆಯುರ್ವೇದ ಕಾಲೇಜಿನ ವಿಧ್ಯಾರ್ಥಿಗಳು, ಪ್ರವಾಸಿಗರು ಹಾಗೂ ಪಿಲಿಕುಳ ಜೈವಿಕ ಉದ್ಯಾನವನದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.