ಕರಾವಳಿ ಉತ್ಸವವನ್ನು ಪ್ರತಿವರ್ಷದಲ್ಲಿ ಅರ್ಥಪೂರ್ಣವಾಗಿ ನಡೆಸಿ: ಮುಲ್ಲೈ ಮುಹಿಲನ್

ಕರಾವಳಿ ಉತ್ಸವವನ್ನು ಪ್ರತಿವರ್ಷದಲ್ಲಿ ಅರ್ಥಪೂರ್ಣವಾಗಿ ನಡೆಸಿ: ಮುಲ್ಲೈ ಮುಹಿಲನ್


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುಸಂಸ್ಕೃತಿಯ ಪ್ರತಿಬಿಂಬವಾಗಿ ನಡೆಸುವ ಕರಾವಳಿ ಉತ್ಸವವನ್ನು ಪ್ರತಿವರ್ಷವೂ ಅರ್ಥಪೂರ್ಣವಾಗಿ ನಡೆಸಿಕೊಂಡು ಹೋಗಬೇಕು. ಈ ನಿಟ್ಟಿನಲ್ಲಿ ಕಳೆದ ವರ್ಷದ ಉತ್ಸವದಿಂದ ಉಳಿಕೆಯಾದ ಮೊತ್ತವನ್ನು ಕಾಯ್ದಿರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು.

ವರ್ಗಾವಣೆ ಹಿನ್ನೆಲೆಯಲ್ಲಿ ಬೀಳ್ಕೊಡುಗೆಯ ಶುಭಾಶಯ ಸಲ್ಲಿಸಿದ ಕೊಂಕಣಿ, ಬ್ಯಾರಿ, ತುಳು ಅಕಾಡೆಮಿಯ ಅಧ್ಯಕ್ಷರ ಜೊತೆಗೆ ಅವರು ಈ ಅಭಿಪ್ರಾಯವನ್ನು ಹಂಚಿಕೊಂಡರು. 

ಕಳೆದ ಸಾಲಿನ ಕರಾವಳಿ ಉತ್ಸವದಲ್ಲಿ 1.20 ಕೋಟಿ ರೂ. ಉಳಿತಾಯವಾಗಿದೆ, ಮುಂದಿನ ಕರಾವಳಿ ಉತ್ಸವ ನಡೆಸುವವರಿಗೆ ಯಾವುದೇ ಆರ್ಥಿಕ ಹೊರೆಯಾಗದು, ಉತ್ಸವವನ್ನು ಮತ್ತಷ್ಟು ಅರ್ಥಪೂರ್ಣವಾಗಿ ನಡೆಸಿಕೊಂಡು ಹೋಗಬೇಕು. ಇದೇ ವೇಳೆ ಕರಾವಳಿ ಉತ್ಸವ ಮೈದಾನದ ಒಂದು ಪಾರ್ಶ್ವದಲ್ಲಿ ವಾಣಿಜ್ಯ ಕಟ್ಟಡವನ್ನು ನಿರ್ಮಿಸಿ ಅದರ ಆದಾಯದ ಅರ್ಧ ಭಾಗವನ್ನು ಕರಾವಳಿ ಉತ್ಸವ ಹಾಗೂ ಇನ್ನರ್ಧ ಭಾಗವನ್ನು ಮಂಗಳಾ ಕ್ರೀಡಾಂಗಣದ ನಿರ್ವಹಣೆಗೆ ಬಳಸಿಕೊಳ್ಳಬಹುದಾಗಿದೆ, ಈ ನಿಟ್ಟಿನಲ್ಲಿ ಚಿಂತನೆಗಳನ್ನು ನಡೆಸುವಂತೆ ಮುಲ್ಲೈ ಮುಹಿಲನ್ ಅವರು ಸಲಹೆ ನೀಡಿದರು.

ಹಳೆ ಜಿಲ್ಲಾಧಿಕಾರಿಗಳ ಕಟ್ಟಡವನ್ನು ಪಾರಂಪರಿಕ ಕಟ್ಟಡವಾಗಿ ರೂಪಿಸಿ ಕಲೆ, ಸಂಸ್ಕೃತಿಯ ಚಟುವಟಿಕೆಯ ಕೇಂದ್ರವಾಗಿ ರೂಪಿಸುವ ಬಗ್ಗೆ ಈಗಾಗಲೇ ಚಿಂತಿಸಲಾಗಿದ್ದು, ಈ ಯೋಜನೆಗೆ ಅಕಾಡೆಮಿಗಳು ಹಾಗೂ ಕಲಾವಿದರು ಪೂರಕವಾಗಿ ಸ್ಪಂದಿಸಬೇಕು ಅವರು ಎಂದು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿಗಳನ್ನು ತುಳು, ಕೊಂಕಣಿ, ಬ್ಯಾರಿ ಭಾಷೆಯ ಪುಸ್ತಕ ನೀಡಿ ಅಭಿನಂದಿಸಲಾಯಿತು.

ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್, ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹಾಗೂ ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article