
ರಥಬೀದಿಯ ಸರ್ಕಾರಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
Saturday, June 21, 2025
ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂ.21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೀವನದ ಒಂದು ಭಾಗವಾಗಿ ಯೋಗವನ್ನು ಪ್ರತಿನಿತ್ಯ ಅಭ್ಯಾಸ ಮಾಡಬೇಕು ಎಂದು ಹೇಳಿದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ, ಡಾ. ಅಪರ್ಣ ಆಳ್ವ ಅವರು ಯೋಗ ತರಬೇತಿಯನ್ನು ನೀಡಿದರು. ಕಾಲೇಜಿನ ಸ್ನಾತಕ ವಿಭಾಗದ ಸಂಯೋಜಕರು, ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ವಸಂತಿ ಪಿ., ದೈಹಿಕ ಶಿಕ್ಷಣ ನಿರ್ದೇಶಕಿ ಶುಭಾ ಕೆ.ಎಚ್, ಎನ್.ಎಸ್.ಎಸ್ ಯೋಜನಾಧಿಕಾರಿಯಾದ ಡಾ. ಮೋಹನ್‌ದಾಸ್, ಸಾಂಸ್ಕೃತಿಕ ಸಂಘದ ಸಂಚಾಲಕಿ ಡಾ. ಕೃಷ್ಣಪ್ರಭಾ, ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅರುಣ ಕುಮಾರಿ, ಎನ್‌ಎಸ್‌ಎಸ್ ಸ್ವಯಂ ಸೇವಕರು, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ನಾತಕೋತ್ತರ ವಿಭಾಗದ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಶಾಂತಿ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿದರು.