ಗಿಗ್, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕೇಂದ್ರದಿಂದ ವಿಶೇಷ ಯೋಜನೆ: ಸಚಿವೆ ಶೋಭಾ ಕರಂದ್ಲಾಜೆ

ಗಿಗ್, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕೇಂದ್ರದಿಂದ ವಿಶೇಷ ಯೋಜನೆ: ಸಚಿವೆ ಶೋಭಾ ಕರಂದ್ಲಾಜೆ


ಮಂಗಳೂರು: ಗಿಗ್ ಹಾಗೂ ಎಲ್ಲ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪುಗೊಳಿಸುತ್ತಿದೆ. ಈ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿ, ಕಾರ್ಮಿಕ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಯುತ್ತಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದಲ್ಲಿರುವ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ದೇಶದಲ್ಲಿ 54 ಲಕ್ಷ ಗಿಗ್ ಕೆಲಸಗಾರರಿದ್ದಾರೆ, ಇದು ಮುಂದಿನ 10 ವರ್ಷದಲ್ಲಿ 25 ಕೋಟಿಗೇರುವ ಸಾಧ್ಯತೆಗಳಿವೆ. ಗಿಗ್ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಉದ್ದೇಶವಿದೆ, ಅದಕ್ಕಾಗಿ ವಿಶೇಷ ಯೋಜನೆ ರೂಪಿಸುತ್ತಿದ್ದೇವೆ ಎಂದರು.

ಕೇಂದ್ರದ ಯೋಜನೆ ಕುರಿತಂತೆ ಕೆಲವು ರಾಜ್ಯಗಳು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅದನ್ನು ಪರಿಹರಿಸಲಾಗುವುದು. ಒಟ್ಟು 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಸರಳೀಕೃತ ಕಾರ್ಮಿಕ ಕೋಡ್ ಆಗಿ ವಿಲೀನ ಮಾಡುವ ಯೋಜನೆ ಸರಕಾರಕ್ಕೆ ಇದೆ. 50 ಕೋಟಿ ಅಸಂಘಟಿತ ಕಾರ್ಮಿಕರ ಪ್ರಯೋಜನಕ್ಕಾಗಿ, ಸಾಮಾಜಿಕ ಭದ್ರತೆ, ಇಎಸ್‌ಐ ಇತ್ಯಾದಿ ಒದಗಿಸುವುದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ದೇಶದಲ್ಲಿ ದುಡಿಯುತ್ತಿರುವ ಸುಮಾರು 80 ಕೋಟಿ ಜನರಲ್ಲಿ 10 ಕೋಟಿ ಜನರಿಗೆ ಮಾತ್ರ ಪಿಎಫ್, ಇಎಸ್‌ಐ ಮತ್ತಿತರ ಸಾಮಾಜಿಕ ಭದ್ರತೆಯ ಯೋಜನೆಯ ಪ್ರಯೋಜನ ದೊರೆಯುತ್ತಿದೆ. ಉಳಿದ 70 ಕೋಟಿ ಕಾರ್ಮಿಕರು ಈ ಸೌಲಭ್ಯ ವಂಚಿತರಾಗಿದ್ದಾರೆ ಎಂದ ಅವರು, ಬ್ರಿಟಿಷರ ಕಾಲದ 29 ಕಾರ್ಮಿಕ ಕಾಯ್ದೆಗಳು ಇಂದಿಗೂ ಅಸ್ತಿತ್ವದಲ್ಲಿದ್ದು, ಇವುಗಳನ್ನು ಪ್ರಸಕ್ತ ಕಾಲದ ಆವಶ್ಯಕತೆಗೆ ತಕ್ಕಂತೆ ಬದಲಾಯಿಸುವ ಕುರಿತು ಕೇಂದ್ರ ಸರ್ಕಾರ ಮುತುವರ್ಜಿ ವಹಿಸುತ್ತಿದೆ. ಕಾರ್ಮಿಕರ ಕನಿಷ್ಠ ವೇತನ ಏರಿಕೆ ಕೂಡ ಅಗತ್ಯವಾಗಿದ್ದು, ಈ ಕುರಿತು ಕೂಡ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಸಚಿವಾಲದಯದ ಪೋರ್ಟಲ್ನಲ್ಲಿ ಸಚಿವಾಲಯದ ವ್ಯಾಪ್ತಿಯಲ್ಲಿ ಒಳಪಡುವ 6.45 ಉದ್ಯಮಗಳು ನೋಂದಣಿಯಾಗಿವೆ. ದೇಶದಲ್ಲಿ ಅತ್ಯಧಿಕ ಜನರು ಅವಲಂಬಿಸಿರುವ ಕೃಷಿ ಕ್ಷೇತ್ರವು ಜಿಡಿಪಿಗೆ ಶೇ.18 ಕೊಡುಗೆ ನೀಡುತ್ತಿದ್ದರೆ, ಅಧಿಕ ಉದ್ಯೋಗ ಒದಗಿಸುವ ವಿಷಯದಲ್ಲಿ ಎರಡನೇ ಸ್ಥಾನದಲ್ಲಿರುವ ಎಂಎಸ್‌ಎಂಇ ದೇಶದ ಸುಮಾರು 26 ಕೋಟಿ ಜನರಿಗೆ ಉದ್ಯೋಗ ಒದಗಿಸುತ್ತಿದ್ದು, ಜಿಡಿಪಿಗೆ ಶೇ.30 ಕೊಡುಗೆ ನೀಡುತ್ತಿದೆ. ರಫ್ತಾಗುವ ವಸ್ತುಗಳಲ್ಲಿ ಎಂಎಸ್‌ಎಂಇ ಪಾಲು ಶೇ.೪೦ರಷ್ಟು ಇದೆ ಎಂದು ವಿವರಿಸಿದರು.

ನರೇಂದ್ರ ಮೋದಿ ಅವರು 2014 ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ದೇಶದಲ್ಲಿ ಪ್ರವಾಸ ನಡೆಸುವ ಸಂದರ್ಭ ಗಡಿಗಳ ರಕ್ಷಣೆ, ಭ್ರಷ್ಟಾಚಾರ ರಹಿತ ಸರ್ಕಾರ, ಪ್ರಧಾನಿ ಸ್ಥಾನದ ಘನತೆಯ ರಕ್ಷಣೆ ಹಾಗೂ ದೇಶದ ಅಭಿವೃದ್ಧಿಗೆ ವೇಗ ಎನ್ನುವ ಪ್ರಧಾನ ನಾಲ್ಕು ಪ್ರಧಾನ ನಾಲ್ಕು ಭರವಸೆಗಳನ್ನು ಜನತೆಗೆ ನೀಡಿದ್ದರು. ಈ ಭರವಸೆ ಇಂದು ಈಡೇರಿದೆ. ಆಂತರಿಕ, ಬಾಹ್ಯ ಸುರಕ್ಷೆ ಎರಡೂ ಸಾಧ್ಯವಾಗಿದೆ. ದೇಶದ ಸೇನೆಯು ಶೇ.95 ರಷ್ಟುಸ್ವಾವಲಂಬನೆ, ಆತ್ಮ ನಿರ್ಭರತೆ ಸಾಧಿಸಿದೆ. ಯುದ್ಧ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವಷ್ಟು ನಾವು ಬೆಳೆದಿದ್ದೇವೆ ಎಂದು ಹೇಳಿದರು.

ರಾಜ್ಯಗಳಿಗೆ ಕೇಂದ್ರ ನೆರವು..:

ಭಾರತದ ಆರ್ಥಿಕತೆಯು ಇಂದು ಜಾಗತಿಕ ಮಟ್ಟದಲ್ಲಿ ನಾಲ್ಕನೇ ಸ್ಥಾನದ ಸಾಮೀಪ್ಯವಿದೆ. ಶೀಘ್ರದಲ್ಲೇ ಮೂರನೇ ಸ್ಥಾನ ಪಡೆಯುವುದು ಮೋದಿ ಅವರ ಸಂಕಲ್ಪವಾಗಿದೆ. 2047ರ ವೇಳೆಗೆ ವಿಕಸಿತ ಭಾರತವಾಗಲು ಯಾವುದೇ ರಾಜ್ಯ ಅಭಿವೃದ್ಧಿಯಿಂದ ವಂಚಿತವಾಗಬಾರದು ಎಂಬುದು ಮೋದಿಯವರ ಸಂಕಲ್ಪ. ಅದಕ್ಕಾಗಿ ತಾರತಮ್ಯ ರಹಿತ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನಗಳನ್ನು ಕೊಡುತ್ತಿದೆ ಎಂದರು.

ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಯತೀಶ್‌ಆರ್ವಾರ್, ಹರೀಶ್ ಕಂಜಿಪಿಲಿ, ಪ್ರೇಮಾನಂದ ಶೆಟ್ಟಿ, ನಂದನ್ ಮಲ್ಯ, ಸಂಜಯ ಪ್ರಭು, ವಸಂತ ಪೂಜಾರಿ, ರೂಪಾ ಡಿ.ಬಂಗೇರ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article