
ಚರ್ಮದ ಆರೋಗ್ಯದ ಕುರಿತು ಜಾಗೃತಿ ಕಾರ್ಯಕ್ರಮ
Tuesday, June 17, 2025
ಮಂಗಳೂರು: ವಳಚಿಲ್‌ನ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಚರ್ಮದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಂಗಳೂರಿನ ಯೆನೆಪೋಯ ಸ್ಪೆಷಾಲಿಟಿ ಆಸ್ಪತ್ರೆಯ ಚರ್ಮರೋಗ ತಜ್ಞ ಡಾ. ಮಾಲ್ಕಾಮ್ ಪಿಂಟೊ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಡಾ. ಮಾಲ್ಕಾಮ್ ಪಿಂಟೊ ವೈಯಕ್ತಿಕ ನೈರ್ಮಲ್ಯ ಮತ್ತು ಚರ್ಮದ ಆರೋಗ್ಯದ ಮಹತ್ವದ ಕುರಿತು ತಮ್ಮ ಒಳನೋಟಗಳನ್ನು ಹಂಚಿಕೊಂಡರು. ವಿವಿಧ ಚರ್ಮ ರೋಗಗಳು ಮತ್ತು ಅವುಗಳ ಪರಿಹಾರಗಳು ಹಾಗೂ ಸಕಾಲಿಕ ಚಿಕಿತ್ಸೆಯ ಅಗತ್ಯದ ಬಗ್ಗೆ ಅವರು ವಿವರಿಸಿದರು.
ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ವೈಯಕ್ತಿಕ ನೈರ್ಮಲ್ಯ ಮತ್ತು ಆರೋಗ್ಯದ ಕುರಿತು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ಪ್ರಾಂಶುಪಾಲ ಡಾ. ಎನ್.ಕೆ. ವಿಜಯನ್ ಕರಿಪ್ಪಾಲ್, ಉಪಪ್ರಾಂಶುಪಾಲ(ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ, ಕೋಚಿಂಗ್ ಮುಖ್ಯಸ್ಥ ಗುರುದತ್ತ ಎನ್. ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಧ್ಯಾನ್ ಆರ್. ಸ್ವಾಗತಿಸಿ, ವಂದಿಸಿದರು.