ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವ ಭೇಟಿ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವ ಭೇಟಿ


ಮಂಗಳೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು  ಮುಡಿಪು ಕುರ್ನಾಡು ಸಮೀಪದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.

ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ  ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. 

ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಕಾರಾಗೃಹ ಇಲಾಖೆ ಡಿಐಜಿ ದಿವ್ಯಶ್ರೀ ಅವರು ಸಚಿವರಿಗೆ ವಿವರ ನೀಡಿದರು.

ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ, ಪಶ್ಚಿಮ ವಲಯ ಐಜಿಪಿ  ದೇವಜ್ಯೋತಿ ರೇ ಮೊದಲಾದವರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article