ಎಸ್‌ಸಿಡಿಸಿಸಿ ಬ್ಯಾಂಕ್  ಕಾರ್ಯಸಾಧನೆಗೆ ಸಚಿವರ ಮೆಚ್ಚುಗೆ

ಎಸ್‌ಸಿಡಿಸಿಸಿ ಬ್ಯಾಂಕ್ ಕಾರ್ಯಸಾಧನೆಗೆ ಸಚಿವರ ಮೆಚ್ಚುಗೆ


ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಗೆ ಆಗಮಿಸಿದ್ದು , ಈ ಸಂದರ್ಭದಲ್ಲಿ ಸಚಿವರಿಬ್ಬರು ಎಸ್ ಸಿಡಿಸಿಸಿ ಬ್ಯಾಂಕಿನ ಕಾರ್ಯಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್  ಅವರು  ಸಚಿವರಿಬ್ಬರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ಬ್ಯಾಂಕಿನ ಪ್ರಗತಿಯ ಕುರಿತು ವಿವರಿಸಿದರು.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು , ಆಧುನಿಕ ತಂತ್ರಜ್ಞಾನದ ಮೂಲಕ 113 ಶಾಖೆಗಳಲ್ಲಿ ಗ್ರಾಹಕರಿಗೆ  ಉತ್ಕೃಷ್ಟ ಸೇವೆಯನ್ನು ನೀಡುತ್ತಿದೆ. ಬ್ಯಾಂಕಿನ ಎಲ್ಲಾ ಶಾಖೆಗಳು ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ  ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆಯನ್ನು ನೀಡುತ್ತಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಸ್ವಸಹಾಯ ಸಂಘಗಳ ಕಾರ್ಯ ನಿರ್ವಹಣೆಯಲ್ಲೂ  ಬ್ಯಾಂಕ್  ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸುಮಾರು 40000ಕ್ಕೂ ಹೆಚ್ಚು ನವೋದಯ ಸ್ವಸಹಾಯ ಸಂಘಗಳನ್ನು ಸಂಘಟಿಸಲಾಗಿದೆ. ಮಾತ್ರವಲ್ಲ ಮಂಗಳೂರು ಹಾಗೂ ಉಡುಪಿಯಲ್ಲಿ  ಸುಸಜ್ಜಿತ ವಾಹನದಲ್ಲಿ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಬ್ಯಾಂಕ್ ನೀಡುತ್ತಿದೆ ಎಂದು  ಡಾ. ಎಂ. ಎನ್. ರಾಜೇಂದ್ರಕುಮಾರ್  ಬ್ಯಾಂಕಿನ ಕಾರ್ಯನಿರ್ವಹಣೆಯ ಕುರಿತು ವಿವರಿಸಿದರು

ಸನ್ಮಾನ..:

ಎಸ್ ಸಿಡಿಸಿಸಿ ಬ್ಯಾಂಕಿಗೆ ಮೊದಲ ಬಾರಿ ಆಗಮಿಸಿದ ಕರ್ನಾಟಕ ಸರಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್  ಅವರನ್ನು ಹಾಗೂ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕ ಡಾ. ಎಂ. ಎ ಸಲೀಂ ಅವರನ್ನು ಬ್ಯಾಂಕ್ ವತಿಯಿಂದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಗೌರವಿಸಿದರು.

ಶಾಸಕರಾದ ಅಶೋಕ್ ಕುಮಾರ್ ರೈ,ಐವನ್ ಡಿ’ ಸೋಜ, ಮಂಜುನಾಥ ಭಂಡಾರಿ, ಬ್ಯಾಂಕಿನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಸದಾಶಿವ ಉಳ್ಳಾಲ್, ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಟ್ರಸ್ಟಿ ಮೇಘರಾಜ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article