ಗುಂಪು ಹತ್ಯೆ: ಮೂವರಿಗೆ ಜಾಮೀನು

ಗುಂಪು ಹತ್ಯೆ: ಮೂವರಿಗೆ ಜಾಮೀನು

ಮಂಗಳೂರು: ನಗರದ ಹೊರವಲಯದ ಕುಡುಪುವಿನಲ್ಲಿ 2025ರ ಎ.27ರಂದು ನಡೆದ ಅಶ್ರಫ್ ಗುಂಪು ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳಿಗೆ ಗುರುವಾರ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಗುಂಪು ಹತ್ಯೆ ಪ್ರಕರಣದ 14ನೇ ಆರೋಪಿ ಸಂದೀಪ್, 15ನೇ ಆರೋಪಿ ದೀಕ್ಷಿತ್, 19ನೇ ಆರೋಪಿ ಸಚಿನ್ ಗೆ ಜಾಮೀನು ನ್ಯಾಯಾಲಯವು ಜಾಮೀನು ನೀಡಿದೆ.

ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ರಾಹುಲ್ ಮತ್ತು ಕೆ. ಸುಶಾಂತ್ ಗೆ ದಕ್ಷಿಣ ಕನ್ನಡ ಜಿಲ್ಲಾ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೇ 31, 2025 ರಂದು ಜಾಮೀನು ಮಂಜೂರು ಮಾಡಿತ್ತು. ಗುರುವಾರ ಜೂ.5 ರಂದು ಮತ್ತೆ ಮೂವರಿಗೆ ಜಾಮೀನು ಮಂಜೂರಾಗುವ ಮೂಲಕ ಒಟ್ಟು 5 ಮಂದಿಗೆ ಜಾಮೀನು ಸಿಕ್ಕಂತಾಗಿದೆ.

ಎ.27, 2025 ರಂದು ಕುಡುಪುವಿನ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಅಶ್ರಫ್ ಎಂಬವರನ್ನು ದುಷ್ಕರ್ಮಿಗಳು ಥಳಿಸಿ ಹತ್ಯೆಗೈದಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article