ಹುಸಿ ಬಾಂಬ್ ಬೆದರಿಕೆ ಹಾಕಿದ ವಿದ್ಯಾರ್ಥಿನಿಯ ಬಂಧನ

ಹುಸಿ ಬಾಂಬ್ ಬೆದರಿಕೆ ಹಾಕಿದ ವಿದ್ಯಾರ್ಥಿನಿಯ ಬಂಧನ

ಮಂಗಳೂರು: ಸೆಮಿನಾರ್ ತಪ್ಪಿಸುವ ಉದ್ದೇಶದಿಂದ ತಾನು ಕಲಿಯುತ್ತಿರುವ ವೈದ್ಯಕೀಯ ಕಾಲೇಜಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪಿ.ಜಿ.ವಿದ್ಯಾರ್ಥಿನಿ ಮೋನಿಕಾ ಚೌಧರಿ ಎಂಬಾಕೆಯನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೇರಳಕಟ್ಟೆ ಸಮೀಪದ ನಾಟೆಕಲ್ ಕಣಚೂರು ಮೆಡಿಕಲ್ ಕಾಲೇಜಿಗೆ ಫೋನ್ ಕರೆ ಮಾಡಿ ಬಾಂಬ್ ಬೆದರಿಕೆಯೊಡ್ಡಿದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿ ದೂರು ನೀಡಿದ್ದವರೇ ಆರೋಪಿಯಾಗಿದ್ದು ಪ್ರಕರಣವು ಕುತೂಹಲಕ್ಕೆ ಕಾರಣವಾಗಿತ್ತು. ಜೂ.4ರಂದು ಬೆಳಗ್ಗೆ ಕಣಚೂರು ಮೆಡಿಕಲ್ ಕಾಲೇಜಿಗೆ ಅನಾಮೇದೆಯ ವ್ಯಕ್ತಿಯೊಬ್ಬರು ಕರೆ ಮಾಡಿ ಕಾಲೇಜಿಗೆ ಬಾಂಬ್ ಇಡಲಾಗಿದ್ದು ಹನ್ನೊಂದು ಗಂಟೆಗೆ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದು ಹೇಳಿದ್ದರು. ಕೂಡಲೇ ಪೊಲೀಸರಿಗೆ ದೂರು ನೀಡಲಾಗಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮೊದಲಾದವರು ಬಂದು ತನಿಖೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ಪೊಲೀಸರು ದೃಢಪಡಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಪಿ.ಜಿ. ವಿದ್ಯಾರ್ಥಿನಿ ಚಲಸಾನಿ ಮೋನಿಕಾ ಚೌಧರಿ ಎಂಬಾಕೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಳಿಕ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ತಂಡ ರಚಿಸಿ ತನಿಖೆ ನಡೆಸಿ ತಾಂತ್ರಿಕ ವಿಶ್ಲೇಷಣೆ ನಡೆಸಿದಾಗ ದೂರು ನೀಡಿದಾಕೆಯೇ ಆರೋಪಿ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಶನಿವಾರ ಪೊಲೀಸರು ಆರೋಪಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article