
ಮಂಗಳೂರಿನ ಎಸ್‌ಡಿಎಂ ಪಿಜಿ ಸೆಂಟರ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
Saturday, June 21, 2025
ಮಂಗಳೂರು: ಎಸ್‌ಡಿಎಂ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಪೋಸ್ಟ್ ಗ್ರಾಜ್ಯುಯೇಟ್ ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್, ಮಂಗಳೂರು, ಹಾಗೂ ದೇಲಂಪಾಡಿ ಯೋಗ ಪ್ರತಿಷ್ಠಾನದ ಸಂಯೋಗದಲ್ಲಿ ಜೂ.21 ರಂದು ಕಾಲೇಜು ಕ್ಯಾಂಪಸ್‌ನಲ್ಲಿ ರಾಷ್ಟ್ರೀಯ ಏಕೀಕರಣ ವೇದಿಕೆಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಜೂ.9 ರಂದು ಅನಾವರಣಗೊಳಿಸಿದ ಕರ್ಟನ್ ರೈಸರ್ ಮತ್ತು ಪ್ರೋಟೋಕಾಲ್ ಚಾರ್ಟ್‌ನಲ್ಲಿರುವ ಯೋಗ ಆಸನಗಳನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಯೋಗ ಗುರು ಯೋಗ ರತ್ನ ಗೋಪಾಲಕೃಷ್ಣ ದೇಲಂಪಾಡಿ ಮತ್ತು ಅವರ ವಿದ್ಯಾರ್ಥಿಗಳು ಹಲವಾರು ಯೋಗ ಆಸನಗಳನ್ನು ಪ್ರದರ್ಶಿಸಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ಹಾಗೂ ಆರೋಗ್ಯಕರ ಮನಸ್ಸು ಮತ್ತು ದೇಹಕ್ಕಾಗಿ ನಿಯಮಿತವಾಗಿ ಯೋಗ ಮಾಡುವುದರ ಪ್ರಸ್ತುತತೆಯನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕಿ ಡಾ. ಸೀಮಾ ಎಸ್. ಶೆಣೈ, ರಾಷ್ಟ್ರೀಯ ಏಕೀಕರಣ ವೇದಿಕೆ ಸಂಯೋಜಕಿ ಡಾ. ಹರ್ಷಿತಾ ಕೆ. ಹಾಗೂ ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ಎಂಬಿಎ ವಿದ್ಯಾರ್ಥಿನಿ ಸಾಯಿಕೃಪಾ ಎಂ. ಕಾರ್ಯಕ್ರಮ ನಿರೂಪಿಸಿದರು.