ದಕ್ಷಿಣ ಕನ್ನಡ ಪ್ರವಾಸೋದ್ಯಮ ಅಭಿವೃದ್ಧಿಯತ್ತ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಿತ್ತ

ದಕ್ಷಿಣ ಕನ್ನಡ ಪ್ರವಾಸೋದ್ಯಮ ಅಭಿವೃದ್ಧಿಯತ್ತ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಿತ್ತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮು ಸಂಘರ್ಷಗಳಿಂದ ಹೊರತರುವತ್ತ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯ ಕಡೆ ಹೆಚ್ಚಿನ ಗಮನ ಹರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಿ ಉದ್ಯೋಗ ಸೃಷ್ಟಿಯಾದರೆ, ಉತ್ತಮ ವಾತಾವರಣ ನಿರ್ಮಾಣ ಮಾಡಬಹುದು. ಅಭಿವೃದ್ಧಿಯತ್ತ ಮಂಗಳೂರು ಮುಖ ಮಾಡಿ ನೋಡುವಂತೆ ಮಾಡುವಲ್ಲಿ ಪ್ರವಾಸೋದ್ಯಮವನ್ನು ಪ್ರಮುಖ ಅಸ್ತ್ರವನನ್ನಾಗಿ ಬಳಸಲು ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ.

ಈ ನಿಟ್ಟಿನಲ್ಲಿ ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಪ್ರಸ್ತುತದಲ್ಲಿರುವ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವಂತೆ ಸೂಚನೆ ನೀಡಿದರು. ಮಂಗಳೂರಿನಲ್ಲಿ 12 ಬೀಚ್‌ಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮಾಹಿತಿ ಪಡೆದ ಸಚಿವರು, ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆಗಳನ್ನ ರೂಪಿಸುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದರು. ವಿಶೇಷವಾಗಿ ಜಿಲ್ಲೆಯಲ್ಲಿ ಹೋಮ್ ಸ್ಟೇ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಮೊಗವೀರ ಮಹಾಜನ ಸಭಾ ಅಧ್ಯಕ್ಷರು, ಬ್ಯಾರಿ, ತುಳು ಅಕಾಡೆಮಿ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪಾರ್ಕಿಂಗ್ ಸೇರಿದಂತೆ ಮಂಗಳೂರಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಸಮಸ್ಯೆಗಳ ಪರಿಹಾರ ಕುರಿತು ಸಭೆಯಲ್ಲಿ ಚರ್ಚೆ ನಡೆಸಿಲಾಯಿತು. ಮತ್ತೊಂದು ಸುತ್ತಿನ ಸಭೆ ನಡೆಸಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಕುರಿತು ಅಂತಿಮ ನಿರ್ಣಯಗಳನ್ನು ತೆಗೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article