
ಸಂಚಾರಿ ಪೀಠ: ಹಳೆ ಡಿಸಿ ಕಚೇರಿ ಮೀಸಲಿಡಲು ಪತ್ರ
Thursday, June 12, 2025
ಮಂಗಳೂರು: ಕರಾವಳಿ ಸೇರಿದಂತೆ ಏಳು ಜಿಲ್ಲೆಗಳಿಗೆ ಅನ್ವಯವಾಗುವಂತೆ ದ.ಕ. ಜಿಲ್ಲೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ರಚನೆ ಮಾಡುವ ನಿಟ್ಟಿನಲ್ಲಿ ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಮೀಸಲಿರಿಸಲು ಆದೇಶಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರವರು ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯ ಬೇಡಿಕೆ ಬಹುದಿನಗಳದ್ದಾಗಿದೆ. ಈ ಬಗ್ಗೆ ರಾಜ್ಯದ ವಿಧಾನದ ಮಂಡಲದಲ್ಲಿ ಚರ್ಚೆ ನಡೆಸಲಾಗಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯು ಇತ್ತೀಚೆಗೆ ನೂತನ ಕಟ್ಟಡಕ್ಕೆ ಸ್ಥಲಾಂತರಗೊಂಡಿದೆ. ಸ್ಟೇಟ್‌ಬ್ಯಾಂಕ್‌ನ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಹೈಕೋರ್ಟ್ ಸಂಚಾರಿ ಪೀಠಕ್ಕಾಗಿ ಮೀಸಲಿಡುವಂತೆ ಐವನ್ ಡಿಸೋಜಾ ಮನವಿ ಆಡಿದ್ದಾರೆ. ಈ ಮನವಿಯನ್ನು ಆದ್ಯತೆಯಲ್ಲಿ ಪರಿಗಣಿಸಬೇಕು ಎಂದು ಉಸ್ತುವಾರಿ ಸಚಿವರು ಮನವಿಯಲ್ಲಿ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.