
ದ.ಕ.ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು
Saturday, June 21, 2025
ಮಂಗಳೂರು: ದ.ಕ.ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಲೋಕಾಯುಕ್ತ ದಾಳಿಗೊಳಗಾಗಿ 18 ದಿನಗಳ ಕಾಲ ಬಂಧನಕ್ಕೆ ಒಳಗಾಗಿದ್ದ ಕೃಷ್ಣವೇಣಿ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡ ಸರಕಾರವು ಇದೀಗ ಸರಕಾರಿ ಸೇವೆಯಿಂದ ಅಮಾನತು ಗೊಳಿಸಿ ಶಿಸ್ತುಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.