
ಅನಕ್ಷರಸ್ಥರ ಮಾಹಿತಿ ನೀಡಲು ಮನವಿ
Monday, June 2, 2025
ಮಂಗಳೂರು: ದ.ಕ.ಜಿಲ್ಲೆಯನ್ನು “ಸಂಪೂರ್ಣ ಸಾಕ್ಷರ ಜಿಲ್ಲೆ” ಎಂದು ಘೋಷಿಸುವುದು ಒಂದು ಪ್ರಮುಖ ಕಾರ್ಯವಾಗಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಒಟ್ಟು ಅನಕ್ಷರಸ್ಥರ ಸಂಖ್ಯೆಯನ್ನು ಕಂಡುಹಿಡಿಯುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ತಮ್ಮ ತಮ್ಮ ಮನೆಯಲ್ಲಿರುವ ಅನಕ್ಷರಸ್ಥರ ಮಾಹಿತಿಯನ್ನು ಕ್ಯೂ ಆರ್ ಕೋಡ್ ಅನ್ನು ಗೂಗಲ್ ಮುಖಾಂತರ ಸ್ಕ್ಯಾನ್ ಮಾಡಿ ಜೂನ್ 10 ರೊಳಗೆ ಕಡ್ಡಾಯವಾಗಿ ಮಾಹಿತಿಯನ್ನು ತುಂಬಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಛೇರಿ ದೂರವಾಣಿ ಸಂ. 08242451233 ಸಂಪರ್ಕಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.