ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ಹತ್ತನೇ ತರಗತಿ ಮಕ್ಕಳಿಗಾಗಿ ಮಾಹಿತಿ ಕಾರ್ಯಗಾರ

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ಹತ್ತನೇ ತರಗತಿ ಮಕ್ಕಳಿಗಾಗಿ ಮಾಹಿತಿ ಕಾರ್ಯಗಾರ


ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನೂತನ ಶೈಕ್ಷಣಿಕ ವರ್ಷ ಆರಂಭದ ಪೂರ್ವಭಾವಿಯಾಗಿ ಮಕ್ಕಳು ಮತ್ತು ಪೋಷಕರಿಗಾಗಿ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ನಡೆಯಿತು.


ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗರರಾದ ರಮೇಶ್ ಕೆ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ‘ಯಾವುದೇ ಹಂತದಲ್ಲಿ ಮಕ್ಕಳಿಗೆ ಏನು ಕೊರತೆ ಬರದಂತೆ ಅವರ ಸರ್ವೋತೋಮುಖ ಅಭಿವೃದ್ಧಿಗೆ ಬೇಕಾಗಿ ಎಲ್ಲಾ ರೀತಿಯ ವಾರ್ಷಿಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಶಾಲಾ ಆಡಳಿತ  ಮಂಡಳಿಯು ಪ್ರತಿ ಹಂತದಲ್ಲಿಯೂ ಮಕ್ಕಳ ಪರವಾಗಿ ಹೊಸ ಶೈಕ್ಷಣಿಕ ವರ್ಷದಲ್ಲಿ ಅವಶ್ಯಕತೆ ಇರುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡುತ್ತದೆ. ಶಕ್ತಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಪ್ರವಾಚನದ ಜೊತೆಗೆ ಸಂಸ್ಕಾರವನ್ನು ಕಲಿಸಲಾಗುತ್ತದೆ. ಈ ನೂತನ ಶೈಕ್ಷಣಿಕ ವರ್ಷ ಎಲ್ಲಾ ಮಕ್ಕಳಿಗೆ ಶುಭವಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಬಬಿತಾ ಸೂರಜ್ ಅವರು ಶಾಲಾ ವಾರ್ಷಿಕ ಯೋಜನೆಯಲ್ಲಿ ಬರುವ ಎಲ್ಲ ಚಟುವಟಿಕೆಗಳ ಬಗ್ಗೆ ಪರಿಚಯ ಮಾಡಿದರು.


2024-25ನೇ ಸಾಲಿನ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಎರಡನೇ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಅದಿತ್ ಎನ್ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಕಿ ಶ್ವೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article