
ಮಹಾನಗರ ಪಾಲಿಕೆ ಹಾಗೂ ಮೂಡಾ ಕಲೆಕ್ಷನ್ ಕೇಂದ್ರವಾಗಿ ಅವ್ಯವಸ್ಥೆಯ ಆಗರವಾಗಿದೆ: ಡಾ. ವೈ. ಭರತ್ ಶೆಟ್ಟಿ
Thursday, June 19, 2025
ಮಂಗಳೂರು: ಮಹಾನಗರ ಪಾಲಿಕೆ ಹಾಗೂ ಮೂಡಾ ಕಲೆಕ್ಷನ್ ಕೇಂದ್ರವಾಗಿ ಅವ್ಯವಸ್ಥೆಯ ಆಗರವಾಗಿದೆ. ಮೂಡಾದಲ್ಲಿ ಅರ್ಜಿ ಸಲ್ಲಿಸಿದರೆ ಅನುಮತಿಗೆ ಬೆಂಗಳೂರಿಗೆ ಯಾಕೆ ತೆರಳಬೇಕು ಎಂಬುದು ಎಲ್ಲರಿಗೂ ಅರ್ಥವಾಗುವ ಸಂಗತಿ. ಅಷ್ಟರ ಮಟ್ಟಿಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.
ಅವರು ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಮಂಗಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧ ಇಲ್ಲ, ವೈದ್ಯರೇ ಕೈಯಿಂದ ಹಣ ಹಾಕಿ ಬಡವರಿಗೆ ಔಷಧ ನೀಡುವಂತಾಗಿದೆ. ಪ್ರಾಕೃತಿಕ ತೊಂದರೆ ಸೇರಿದಂತೆ ಯಾವುದೇ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರನ್ನು ಸೇರಿಸಿ ಸಭೆ ನಡೆಸುತ್ತಿಲ್ಲ. ಇಲ್ಲಿ ಭ್ರಷ್ಟಾಚಾರ ಡಬ್ಬಲ್ ರೇಟ್ ಕಾರ್ಡ್ ಆಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಜೂ.23 ರಂದು ಬಿಜೆಪಿ ನಗರ ಪಾಲಿಕೆ ಎಂದು ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.