
ಮಂಗಳೂರಿನಲ್ಲಿ ಮತ್ತೆ ತಲವಾರು ದಾಳಿ
ಮಂಗಳೂರು: ಕೋಮು ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಶುಕ್ರವಾರ ಆರಂಭಗೊಂಡಿದ್ದು ಇದರ ನಡುವೆ ಮತ್ತೆ ತಲವಾರು ಝಳಪಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಬ್ಬರು ದುಷ್ಕರ್ಮಿಗಳಿಂದ ವ್ಯಕ್ತಿ ಮೇಲೆ ತಲ್ವಾರ್‌ದಾಳಿಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಜೀಪಮುನ್ನೂರಿನ ಉಮರ್ ಫಾರೂಕ್ ಮೇಲೆ ದಾಳಿಗೆ ಯತ್ನಿಸಲಾಗಿದೆ. ಉಮರ್ ಫಾರೂಕ್ ಘಟನೆ ನಡೆದ ದಿನ ಮುಂಜಾನೆ ಮನೆಯಿಂದ ಜೀಪ್ನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದರು. ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ದಾಳಿಗೆ ಯತ್ನಿಸಲಾಗಿದೆ.
ತಲ್ವಾರ್ ತಗುಲಿ ಫಾರೂಕ್ ವಾಹನದ ಸೈಡ್ ಮಿರರ್‌ಗೆ ಹಾನಿ ಆಗಿದೆ. ಘಟನೆ ಬಗ್ಗೆ ನಿನ್ನೆ ಪೊಲೀಸರಿಗೆ ದೂರು ಉಮರ್ ಫಾರೂಕ್ ನೀಡಿದ್ದು, ಬಿಎನ್‌ಎಸ್ 109, 324(4) ಜೊತೆಗೆ 3(5) BNSರಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.