
ಪೊಲೀಸರ ಅತಿರೇಕದ ಕ್ರಮ ಮುಂದುವರೆದರೆ ಹೋರಾಟ: ಬಿಜೆಪಿ
Tuesday, June 3, 2025
ಮಂಗಳೂರು: ಬಿಜೆಪಿ ನಿಯೋಗ ಮಂಗಳವಾರ ಮಂಗಳೂರಲ್ಲಿ ಪೊಲೀಸ್ ಕಮಿಷನರ್ ಮತ್ತು ಎಸ್ಪಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಹರೀಶ್ ಪೂಂಜಾ, ಡಾ.ಭರತ್ ಶೆಟ್ಟಿ, ಒಂದು ಸಮುದಾಯವನ್ನು ಕೇಂದ್ರೀಕರಿಸಿ ರಾತ್ರಿ ಮನೆಗಳಿಗೆ ಪೊಲೀಸರು ತೆರಳಿ ತನಿಖೆ ನಡೆಸುವುದು ಸರಿಯಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಪೊಲೀಸರ ಅತಿರೇಕದ ಕ್ರಮ ಮುಂದುವರಿದರೆ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಸಭೆ ನಡೆಸಿ ಶಾಸಕರ ನಿಯೋಗ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡುವುದು ಎಂದು ತೀರ್ಮಾನಿಸಲಾಯಿತು.
ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್ ಪುತ್ತೂರು ಭಾಗಿಯಾಗಿದ್ದರು.