
ಎಕ್ಸ್‌ಪರ್ಟ್‌ನಲ್ಲಿ ವನಮಹೋತ್ಸವ
ಅರಣ್ಯ-ಪರಿಸರದಿಂದ ಜೀವವೈವಿಧ್ಯಗಳ ಸಮತೋಲನ
ಮಂಗಳೂರು: ಪ್ರಕೃತಿ ನೀಡಿದ ಕಾಣಿಕೆಗಳನ್ನು ನಾವು ಮರೆಯಬಾರದು. ಅರಣ್ಯ-ಪರಿಸರದಿಂದ ಜೀವವೈವಿಧ್ಯಗಳ ಸಮತೋಲನ ಸಹಜವಾಗಿರುತ್ತದೆ ಎಂದು ಸಿಆರ್‌ಝೆಡ್ ಪ್ರಾದೇಶಿಕ ನಿರ್ದೇಶಕ ಹಾಗೂ ಅರಣ್ಯ ಉಪ ಸಂರಕ್ಷಣಾಧಿಕಾರಿ ರಘು ಡಿ. ಹೇಳಿದರು.
ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ಕ್ಯಾಂಪಸ್ಸಿನಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಭೂಮಿ ಎಂಬ ಉಪಗ್ರಹ ಜೀವ ವೈವಿಧ್ಯತೆಯ ತವರೂರು. ಇದನ್ನು ಕಾಪಾಡುವ ಹೊಣೆ ನಮ್ಮದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರು ಮಾತನಾಡಿ, ಎಕ್ಸ್‌ಪರ್ಟ್‌ನ ಅಭಿವೃದ್ಧಿ ಕಾರ್ಯದಲ್ಲಿ ಪರಿಸರ ಸ್ನೇಹಿ ಕಾಳಜಿ ಇದೆ. ಸೋಲಾರ್, ತ್ಯಾಜ್ಯ ನೀರಿನ ಮರುಬಳಕೆ, ಸಾವಯವ ಕೃಷಿಯ ಪ್ರಯೋಗವನ್ನು ವಿವರಿಸಿದರು.
ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ಪ್ಲಾಸ್ಟಿಕ್ ಮಾಲಿನ್ಯಗಳ ನಿಯಂತ್ರಣ ಪರಿಣಾಮಕಾರಿಯಾಗಿರಬೇಕು ಎಂದು ಹೇಳಿದರು.
ಸಂಸ್ಥೆಯ ಮಾಹಿತಿ ತಂತ್ರಜ್ಙಾನ ನಿರ್ದೇಶಕ ಅಂಕುಶ್ ಎನ್. ನಾಯಕ್, ಪ್ರಾಂಶುಪಾಲ ಡಾ. ಎನ್.ಕೆ. ವಿಜಯನ್ ಕರಿಪ್ಪಾಲ್, ಉಪಪ್ರಾಂಶುಪಾಲೆ(ಆಡಳಿತ) ಧೃತಿ ವಿ. ಹೆಗ್ಡೆ, ಉಪಪ್ರಾಂಶುಪಾಲ(ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ, ಕಾರ್ಯಕ್ರಮ ನಿರ್ದೇಶಕಿ ರಮ್ಯಾ ಗಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ವೈಷ್ಣವಿ ಗುರುರಾಜ್ ಸ್ವಾಗತಿಸಿ, ವಂದಿಸಿದರು.