
ಪಾಣೆಮಂಗಳೂರು ಹಳೆ ಸೇತುವೆ ಸಂಚಾರ ನಿಷೇಧ
Wednesday, June 11, 2025
ಮಂಗಳೂರು: ಬಂಟ್ವಾಳ ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ.
ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಮಾಡಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.