ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಸೆರೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಸೆರೆ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಜ್ಪೆ ಶಾಂತಿಗುಡ್ಡೆಯ ಅಬ್ದುಲ್ ರಜಾಕ್ (59) ಬಂಧಿತ. ಈತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿನ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು  ಯಾನೆ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ನೆರವು ನೀಡಿದ್ದ. ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article