
ಪಾಲಿಕೆಗೆ ಲೋಕಾಯುಕ್ತ ದಾಳಿ
Saturday, June 21, 2025
ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಜೂ.21ರಂದು ನಡೆದಿದೆ.
ಶನಿವಾರ ಬೆಳಗ್ಗೆ 11.30 ಗಂಟೆ ವೇಳೆಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಪಾಲಿಕೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಎಂಜಿನಿಯರಿಂಗ್, ಯೋಜನೆ, ಕಂದಾಯ, ಲೆಕ್ಕ ಪತ್ರವಿಭಾಗಳಲ್ಲಿ ಕಡತಗಳನ್ನು ಪರಿಶೀಲಿಸಿದ್ದಾರೆ. ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರ ಚಂದ್ರ ಅವರ ನೇತೃತ್ವದಲ್ಲಿ ಇಬ್ಬರು ಡಿವೈಎಸ್ ಪಿ, ನಾಲ್ಕು ಮಂದಿ ಇನ್ಸ್ಪೆಕ್ಟರ್ಗಳು ಹಾಗೂ ಸಿಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.