
ದ.ಕ. ಜಿಲ್ಲೆಯಲ್ಲಿ ಕೋಮುಗಲಭೆ: ಡಿ.ಕೆ. ಶಿವಕುಮಾರ್ ಅವರಿಗೆ ಸಮಗ್ರ ವರದಿ ಸಲ್ಲಿಕೆ
Thursday, June 19, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಪಡೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಳುಹಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೇನ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರ ನೇತೃತ್ವದ ನಿಯೋಗವು ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಎಲ್ಲಾ ಧರ್ಮ, ಸಮುದಾಯದ ಮುಖಂಡರುಗಳನ್ನು ಭೇಟಿ ಮಾಡಿ ವರದಿಯನ್ನು ತಯಾರಿಸಿ ಅದನ್ನು ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಾಯಿತು.
ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.