
ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
Monday, June 16, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಇದರ ಜಂಟಿ ಆಶ್ರಯದಲ್ಲಿ ಇಂದು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸುವ ಕಾರ್ಯಕ್ರಮ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ಅವರ ನೇತೃತ್ವದಲ್ಲಿ ನಡೆಯಿತು.
ದ.ಕ. ಜಿಲ್ಲಾ ಉಪಾಧ್ಯಕ್ಷ ಪ್ರೇಮ್ ಬಲ್ಲಾಳ್ ಬಾಗ್, ಕಾರ್ಯದರ್ಶಿ ರವಿ ಸುಂಕದಕಟ್ಟೆ, ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ಜಿ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್ ಪಿ.ಕೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ ವರ್ಗಿಸ್, ಕಡಬ ಬ್ಲಾಕ್ ಪ್ರದಾನ ಕಾರ್ಯದರ್ಶಿ ಸತೀಶ್ ನಾಯ್ಕ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಷರೀಫ್ ಎ.ಎಸ್. ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಸತೀಶ್ ಪಳಿಕೆ ಇಚಿಲಂಪಾಡಿ, ಕಡಬ ಎಸ್.ಸಿ ಘಟಕದ ಅಧ್ಯಕ್ಷ ಶಶಿಧರ್ ಬೊಟ್ಟಡ್ಕ, ರಾಮಕೃಷ್ಣ.ಡಿ ಹೊಳ್ಳರ್. APMC ಮಾಜಿ ನಿರ್ದೇಶಕ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸದಸ್ಯ ವಸಂತ ಕುಬುಲಾಡಿ, N.S.Y ಕಾರ್ಯದರ್ಶಿ ಸುಹಾಸ್ ಕೊಂಬಾರ್, ದಲಿತ ಮುಖಂಡರಾದ ಆನಂದ ಕೆ.ಪಿ. ಪಡುಬೆಟ್ಟು, ಸುರೇಶ ತೋಟತಿಂಲ, ಬಾಬು ಡೆರೋಡಿ ಕಡಬ, ಆನಂದ ಹೊಸ್ಮಠ ಮತ್ತಿತರರು ಉಪಸ್ಥಿತರಿದ್ದರು.
ಶಶಿದರ್ ಬೊಟ್ಟಡ್ಕ ಸ್ವಾಗತಿಸಿ, ಕೆ.ಪಿ. ಆನಂದ ವಂದಿಸಿದರು.