
ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲು ಮಾರ್ಗಕ್ಕೆ ಸಂಯೋಜಿತ ಡಿಪಿಆರ್‌ಗೆ ಸಲಹೆ: ಕ್ಯಾ. ಚೌಟ
Tuesday, June 10, 2025
ಮಂಗಳೂರು: ಶಿರಾಡಿ ಘಾಟಿಯಲ್ಲಿ ಪ್ರತ್ಯೇಕ ರೈಲು ಮಾರ್ಗ ನಿರ್ಮಿಸಲು ರೈಲ್ವೇ ಇಲಾಖೆ ಕೂಡಾ ಡಿಪಿಆರ್ ಸಿದ್ದಪಡಿಸಲು ಮುಂದಾಗಿದೆ. ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವ ಶಿರಾಡಿ ಘಾಟ್ ಸೂಕ್ಷ್ಮ ಪರಿಸರ ವಲಯದಲ್ಲಿರುವುದರಿಂದ ಇಲ್ಲಿ ರಸ್ತೆ ಮತ್ತು ರೈಲು ಮಾರ್ಗವನ್ನು ಸಮಾನಾಂತರವಾಗಿ ಅಭಿವೃದ್ದಿಸುವ ಸಾಧ್ಯತೆಗಳ ಬಗ್ಗೆ ಅನ್ವೇಷಿಸಲು ರೈಲ್ವೆ ಮಂಡಳಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದ ಜಂಟಿ ಸಮಿತಿಯೊಂದನ್ನು ರಚಿಸುವಂತೆ ಮನವಿ ಮಾಡಲಾಗಿದೆ. ಸಂಯೋಜಿತ ಯೋಜನೆ ರೂಪಿಸುವುದರಿಂದ ಅರಣ್ಯ ಮತ್ತು ಪರಿಸರ ಇಲಾಖೆಗಳ ಅನುಮೋದನೆ ಪಡೆಯುವುದು ಸುಲಭವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.